ವಿಜಯಪುರ: ಹವಾಮಾನ ಬದಲಾವಣೆ ತಡೆಗಟ್ಟುವಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿ, ಕೆಪಿಐಗಳ ಅನುಷ್ಠಾನಕ್ಕೆ ಜಿಲ್ಲಾ ಪಂಚಾಯಿತಿನಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಬಿ.ಕುಂಬಾರ ಹೇಳಿದರು.

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕ್ರಿಯಾ ಯೋಜನೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿ ಡಾ.ಪವಿತ್ರಾ ಪಿ.ನಾಯಕ್ ಅವರು ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ ಕುರಿತು ಸವಿಸ್ತಾರವಾಗಿ ವಿವರಣೆ ನೀಡಿದರು.

ಹವಾಮಾನ ಕಾರ್ಯನೀತಿ, ಕಾರ್ಯತಂತ್ರಗಳು, ವಿವಿಧ ಇಲಾಖೆಗಳ ಪಾತ್ರ ಹಾಗೂ ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಮತ್ತು ಜಿಲ್ಲಾಸ್ಥರದ ದತ್ತಾಂಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಅರಣ್ಯ ಇಲಾಖೆಯ ಶಿವರುದ್ರಪ್ಪ ಕಬಾಡಗಿ ಮಾತನಾಡಿ, ಜಿಲ್ಲೆಯಲ್ಲಿ ಇಲಾಖೆಯು ತೆಗೆದುಕೊಂಡ ಕ್ರಮಗಳ ಕುರಿತು ವಿವರಿಸಿದರು. ಜಲ ಸಂಪನ್ಮೂಲ ವಲಯಕ್ಕೆ ಸಂಬಂಧಿಸಿದ ಹವಾಮಾನ ಕ್ರಿಯಾ ಯೋಜನೆ ಕುರಿತು ಜಲ ಸಂಪನ್ಮೂಲ ತಜ್ಞರಾದ ಡಾ. ಶಶಿಕುಮಾರ್ ಎನ್. ಸಂಕ್ಷಿಪ್ತ ಮಾಹಿತಿ ನೀಡಿದರು.

ಸಭೆಯಲ್ಲಿ ಎನ್.ಆರ್.ಡಿ.ಎಂ.ಎಸ್ ಅಧಿಕಾರಿ ಚನ್ನಮ್ಮ ಕರೆಪ್ಪ, ಎಂಪ್ರಿ ಸಂಸ್ಥೆಯ ರುಚಿತಾ ಶ್ರೀ, ತರಬೇತಿ ಸಹಾಯಕರಾದ ರಾಘವೇಂದ್ರ ಎನ್. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-26-1728939205

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.