ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಆಲಗೂರ ವಿರುದ್ಧ ಸಂಬಂಧಿ ಬೆಳ್ಳುಬ್ಬಿ ಸ್ಪರ್ಧೆ

Published 3 ಏಪ್ರಿಲ್ 2024, 12:38 IST
Last Updated 3 ಏಪ್ರಿಲ್ 2024, 12:38 IST
ಅಕ್ಷರ ಗಾತ್ರ

ವಿಜಯಪುರ: ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ ಅವರ ಸಂಬಂಧಿ ನಿವೃತ್ತ ಪೊಲೀಸ್‌ ವರಿಷ್ಠಾಧಿಕಾರಿ ಬಿ.ವೈ. ಬೆಳ್ಳುಬ್ಬಿ ಅವರು ಲೋಕಸಭೆ ಚುನಾವಣೆಯಲ್ಲಿ ಆಲಗೂರ ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. 

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆಗೆ ವಿಜಯಪುರ ಮೀಸಲು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಸದ್ಯ ಕೆಲ ಪ್ರಾದೇಶಿಕ ಪಕ್ಷಗಳೊಂದಿಗೆ ಸಂಪರ್ಕದಲ್ಲಿದ್ದು ಟಿಕೆಟ್‌ ನೀಡಿದರೆ ಆ ಪಕ್ಷದಿಂದ ಚುನಾವಣೆ ಸ್ಪರ್ಧಿಸುತ್ತೇನೆ ಎಂದರು. 

ನಾನು ದಲಿತ ಚಲವಾದಿ (ಬಲಗೈ) ಸಮುದಾಯಕ್ಕೆ ಸೇರಿದ್ದು, ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡಿದ್ದೇನೆ. ಪೊಲೀಸ್‌ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಜಿಲ್ಲೆಯ ಬಹುತೇಕ ಹಳ್ಳಿಗಳ ಜನರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದೇನೆ ಎಂದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ, ವಿಶ್ವ ಪಾರಂಪರಿಕ ತಾಣದ ಪಟ್ಟಿಯಲ್ಲಿ ಜಿಲ್ಲೆ ಸೇರ್ಪಡೆ ಶ್ರಮಿಸುತ್ತೇನೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತೇನೆ ಎಂದರು.

ಗೋಷ್ಠಿಯಲ್ಲಿ ಲಕ್ಷ್ಮಣ ಬಿರಾದಾರ, ಸಿದ್ದಲಿಂಗಪ್ಪ ಹಾದಿಮನಿ, ಕೃಷ್ಣಾ ಬಾಡಗಂಡಿ, ಯಲ್ಲಪ್ಪ ಹಂಗರಗಿ, ಆರ್.ಜಿ. ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT