ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: ಚುರುಕಿನ ಮತದಾನ 

Last Updated 28 ಅಕ್ಟೋಬರ್ 2022, 3:49 IST
ಅಕ್ಷರ ಗಾತ್ರ

ವಿಜಯಪುರ: ಭಾರೀ ರಾಜಕೀಯ ಜಿದ್ದಾಜಿದ್ದಿಗೆ ವೇದಿಕೆಯಾಗಿರುವ ವಿಜಯಪುರ ಮಹಾನಗರ ಪಾಲಿಕೆಗೆ ನಡೆಯುತ್ತಿರುವ ಚುನಾವಣೆಗೆ ಶುಕ್ರವಾರ ಬೆಳಿಗ್ಗೆ 7 ರಿಂದ ಮತದಾನ ಆರಂಭವಾಗಿದೆ.

ಬೆಳಿಗ್ಗೆಯಿಂದಲೇ ನಗರವಾಸಿಗಳು ಸರದಿಯಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸತೊಡಗಿದ್ದು, ಸಂಜೆ 5ರ ವರೆಗೆ ಮತದಾನ ನಡೆಯಲಿದೆ.

35 ವಾರ್ಡ್ ಗಳನ್ನು ಹೊಂದಿರುವ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಸಂಬಂಧ 303 ಮತಗಟ್ಟೆಗಳನ್ನು ತೆರೆಯಲಾಗಿದೆ. 48 ಅತೀ ಸೂಕ್ಷ್ಮ, 83 ಸೂಕ್ಷ್ಮ, 172 ಸಾಧಾರಣ ಮತಗೆಟ್ಟೆಗಳೆಂದು ಗುರುತಿಸಿ, ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಒಟ್ಟು 2,88,288 ಮತದಾರರು ಇದ್ದಾರೆ. ವಿದ್ಯುನ್ಮಾನ ಮತಯಂತ್ರಗಳನ್ನು ಬಳಕೆ ಮಾಡಲಾಗಿದೆ. ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.ಮತದಾನದ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

174 ಅಭ್ಯರ್ಥಿಗಳು:
ಕಣದಲ್ಲಿ ಕಾಂಗ್ರೆಸ್ 35, ಬಿಜೆಪಿ 33, ಜೆಡಿಎಸ್ 20, ಎಎಪಿ 15, ಎಐಎಂಐಎಂ 4, ಕೆಅರ್ ಎಸ್ , ಜನತಾ ಪಾರ್ಟಿ ತಲಾ ಮೂರು, ಎಸ್ ಡಿಪಿಐ ಎರಡು ಮತ್ತು ಬಿಎಸ್ ಪಿ ಒಂದು ಹಾಗೂ 58 ಜನ ಪಕ್ಷೇತರ ಸೇರಿದಂತೆ 174 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ರಾಜಕೀಯ ಪ್ರತಿಷ್ಠೆ:

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಹಾಗೂ ಸಚಿವ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಉಮೇಶ ಕಾರಜೋಳ, ಕಾಂಗ್ರೆಸ್ ಮಾಜಿ ಶಾಸಕರಾದ ಪ್ರೊ.ರಾಜು ಆಲಗೂರ, ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಅವರಿಗೆ ರಾಜಕೀಯವಾಗಿ ಈ ಚುನಾವಣೆ ಪ್ರತಿಷ್ಠೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT