ವಿಜಯಪುರ : ಮಹಾನಗರ ಪಾಲಿಕೆಯಲ್ಲಿ ಇ-ಸ್ವತ್ತು ಮಾಡಲು ಮತ್ತಿತರೆ ಕೆಲಸಗಳಿಗಾಗಿ ವಿನಾಕಾರಣ ವಿಳಂಬ ಮಾಡಿದರೆ, ಲಂಚ ಕೇಳಿದರೆ ನನ್ನ ಸಾರ್ವಜನಿಕ ಸಂಪರ್ಕ ಕಚೇರಿ ಇಲ್ಲವೇ ನನ್ನ ನಂಬರ್ಗೆ ಕರೆ ಮಾಡಿ ಇಲ್ಲವೇ, ವಾಟ್ಸ್ಆ್ಯಪ್ ಮೂಲಕ ಮಾಹಿತಿ ನೀಡಿದರೆ, ತಕ್ಷಣ ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನಗರದ ವಾರ್ಡ್ ನಂ.32ರಲ್ಲಿರುವ ಜೋರಾಪುರ ಪೇಠ ದುರ್ಗಾದೇವಿ ದೇವಸ್ಥಾನದ ಹತ್ತಿರ ಇತ್ತೀಚೆಗೆ ಸಮುದಾಯ ಭವನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ದೂಳಾಪುರವಾಗಿದ್ದ ವಿಜಯಪುರ ನಗರದಲ್ಲಿ ಸುಸಜ್ಜಿತ ಸಿಸಿ ರಸ್ತೆಗಳು, ಒಳಚರಂಡಿ ನಿರ್ಮಾಣ, ಉದ್ಯಾನಗಳ ಅಭಿವೃದ್ಧಿ, ರಸ್ತೆಗಳಿಗೆ ಮಹಾಪುರುಷರ ಹೆಸರು ನಾಮಕರಣ, ವೃತ್ತಗಳ ನಿರ್ಮಾಣ, ಕಾಯಿಪಲ್ಲೆ ಮಾರುಕಟ್ಟೆ, ದೇವಸ್ಥಾನಗಳ ಜೀರ್ಣೋದ್ಧಾರ, ಸಮುದಾಯ ಭವನಗಳ ನಿರ್ಮಾಣ, ಶಾಲಾ ಕೊಠಡಿಗಳು ಹೀಗೆ ಹತ್ತಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದ ಅತ್ಯಂತ ಶುದ್ಧ ಗಾಳಿ ಬಿಸುವ ಮತ್ತು ಮಾದರಿ ನಗರವಾಗಿ ರೂಪುಗೊಳ್ಳಲು ಸಾಧ್ಯವಾಗಿದೆ ಎಂದರು.

ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಶಿವಾಜಿ ವೃತ್ತದಿಂದ ಡಾ.ಬಾಬು ಜಗಜೀವನರಾಮ ವೃತ್ತದವರೆಗಿನ ರಸ್ತೆ ಅಗಲೀಕರಣಗೊಳಿಸಿ, ಅನುಷ್ಠಾನಗೊಳಿಸಲು ಅಗತ್ಯವಿರುವ ₹32 ಕೋಟಿ ಅನುದಾನವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದು, ಸದರಿ ರಸ್ತೆ ಆಗಲೀಕರಣದಲ್ಲಿ ಬರುವ ಖಾಸಗಿ ಒಡೆತನದ ಆಸ್ತಿಗಳಿಗೆ ಪರಿಹಾರ ನೀಡಿಯೇ ಆದಷ್ಟು ಬೇಗ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮಾತನಾಡಿದರು. ಪಾಲಿಕೆ ಸದಸ್ಯ ರಾಹುಲ್ ಜಾಧವ ಸೇರಿದಂತೆ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-26-584277101

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.