ಗುರುವಾರ , ಜುಲೈ 7, 2022
23 °C

ವಿಜಯಪುರ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೋವಿಡ್-19 ಪೀಡಿತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ವಿಜಯಪುರ: ಕೋವಿಡ್-19 ಪೀಡಿತ (ಪಿ8789) ಮಹಿಳೆಯೊಬ್ಬರು ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಒಂದು ಮಗು 2 ಕೆ.ಜಿ, ಇನ್ನೊಂದು ಮಗು 2.1 ಕೆ.ಜಿ ತೂಕ ಇವೆ. ತಾಯಿ ಹಾಗೂ ಅವಳಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾಸ್ಪತ್ರೆಯ ಸರ್ಜನ್ ಶರಣಪ್ಪ ಕಟ್ಟಿ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯ ಪ್ರಸೂತಿ ತಜ್ಞೆ ಡಾ.ಮನ್‍ಪ್ರೀತ್ ಕೌರ್ ಸಹರೀಯಾ, ಸಿಸ್ಟರ್ ಕಾಶೀಬಾಯಿ, ಡಾ.ಉಪಾಸೆ, ರವಿ ಕೂಚಬಾಳ, ಮೊಹಸೀನ್ ಮಮದಾಪೂರ, ಆರೋಗ್ಯ ಸಿಬ್ಬಂದಿ ಮಲ್ಲಿಕಾರ್ಜುನ ಅವರನ್ನು ಒಳಗೊಂಡ ವೈದ್ಯರ ತಂಡವು ಕೋವಿಡ್ ಪೀಡಿತ ಮಹಿಳೆಗೆ ಸಹಜ ಮತ್ತು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು