ಬುಧವಾರ, ಆಗಸ್ಟ್ 4, 2021
23 °C

ವಿಜಯಪುರ: ಕೋವಿಡ್‌ನಿಂದ ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕೋವಿಡ್‌ನ ಪೀಡಿತ ನಗರದ ಅಕ್ಕಿ ಕಾಲೊನಿ ನಿವಾಸಿ 72 ವರ್ಷದ ವೃದ್ಧ(ಪಿ 31920) ಚಿಕಿತ್ಸೆ ಫಲಕಾರಿಯಾಗದೆ ಜುಲೈ 9 ರಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತೀವ್ರ ರಕ್ತದೊತ್ತಡ, ಸಕ್ಕರೆ ಕಾಯಿಲೆ ಹಾಗೂ ಐಎಚ್‌ಡಿ ಕಾಯಿಲೆಗಳಿಂದ ವೃದ್ಧ ಬಳಲಿದ್ದರು. ಇವರೊಂದಿಗೆ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿವರ ಗುರುತಿಸುವ ಕಾರ್ಯ ನಡೆದಿದೆ ಎಂದರು.

ಇಂಡಿ ತಾಲ್ಲೂಕಿನ ಗುಬ್ಬೇವಾಡ ಗ್ರಾಮದ 65 ವರ್ಷದ ವೃದ್ಧ ಆಸ್ಪತ್ರೆಗೆ ದಾಖಲಾಗುವ ಮುಂಚೆಯೇ ಜುಲೈ 7 ರಂದು ಮೃತಪಟ್ಟಿದ್ದು, ಗಂಟಲುದ್ರವ ಪರೀಕ್ಷಾ ವರದಿ ನಂತರ ಬಂದಿದ್ದು, ಈ ವೃದ್ಧನಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ಹೇಳಿದರು.

ವೃದ್ಧರು ಗುಣಮುಖ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ  95 ವರ್ಷದ(ಪಿ 16,965) ಹಾಗೂ 90 ವರ್ಷದ (ಪಿ12,457) ಇಬ್ಬರು ವೃದ್ಧೆಯರನ್ನು ವೈದ್ಯರು ಗುಣಪಡಿಸಿದ್ದು, ಜುಲೈ 5 ರಂದು ಇಬ್ಬರೂ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಶಂಸೆ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು