ಲಾಕ್‌ಡೌನ್ ನಿಯಮ ತಪ್ಪದೇ ಪಾಲಿಸಿ: ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಸೂಚನೆ

ವಿಜಯಪುರ: ಕೋವಿಡ್ ಲಾಕ್‌ಡೌನ್‌ಗೆ ಸಂಬಂಧಪಟ್ಟಂತೆ ಸರ್ಕಾರವು ಮೇ 7ರಂದು ಹೊರಡಿಸಿದ್ದ ಮಾರ್ಗಸೂಚಿಗಳಲ್ಲಿ ಕೆಲವು ವಿನಾಯಿತಿ ನೀಡಿ ಜೂನ್ 11ರಂದು ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದ್ದು, ಎಲ್ಲರೂ ಕಡ್ಡಾಯವಾಗಿ ಪಾಳಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್ ತಿಳಿಸಿದ್ದಾರೆ.
ಏನೆಲ್ಲ ವಿನಾಯಿತಿ: ಜೂನ್ 14ರ ಬೆಳಿಗ್ಗೆ 6ರಿಂದ ಜೂನ್ 21ರ ಬೆಳಿಗ್ಗೆ 6 ರವರೆಗೆ ಈ ಮಾರ್ಗಸೂಚಿಗಳು ಜಾರಿಯಲ್ಲಿ ಇರಲಿದ್ದು, ಜಿಲ್ಲೆಯ ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಅಗತ್ಯ ವಸ್ತುಗಳ ಮಾರಾಟ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2ರ ವರೆಗೆ ಕಾಲಾವಕಾಶ ಇರದೆ. ಆಹಾರ, ಬೇಳೆಕಾಳು, ಹಣ್ಣು, ತರಕಾರಿ, ಮಾಂಸ, ಮೀನುಮಾಂಸ, ಡೇರಿ, ಹಾಲಿನ ಬೂತ್, ಪಶು ಮೇವು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬೀದಿ ಬದಿ ವ್ಯಾಪಾರಕ್ಕೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2ರ ವರೆಗೆ ಕಾಲಾವಕಾಶ ದೊರಕಿಸಲಾಗಿದೆ.
ಪ್ರಯಾಣಕ್ಕಾಗಿ ಆಟೋ, ಟ್ಯಾಕ್ಸಿಗಳಿಗೆ ಅವಕಾಶ ನೀಡಲಾಗಿದ್ದು ಇಬ್ಬರು ಮಾತ್ರ ಪ್ರಯಾಣಿಸಬಹುದು.
ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದ್ದು, ಸಿಮೆಂಟ್, ಕಬ್ಬಿಣದ ಅಂಗಡಿಗಳಿಗೆ ಅವಕಾಶ ನೀಡಲಾಗಿದೆ.
ಗಾರ್ಮೆಂಟ್ಸ್‌ಗಳಿಗೆ ಶೇ30 ರಷ್ಟು ಅವಕಾಶವಿದ್ದು, ಉಳಿದ ಕಾರ್ಖಾನೆಗಳಿಗೆ ಶೇ 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯಾಚರಣೆಗೆ ಅವಕಾಶ ಕಲ್ಪಿಸಲಾಗಿದೆ.
ಪಾರ್ಕ್‌ಗಳಲ್ಲಿ ವಾಯುವಿಹಾರ, ಜಾಗಿಂಗ್‌ಗಾಗಿ ಅವಕಾಶ ಕಲ್ಪಿಸಲಾಗಿದ್ದು ಬೆಳಿಗ್ಗೆ 5 ರಿಂದ ಬೆಳಿಗ್ಗೆ 10 ತವರೆಗೆ ಕಾಲಾವಕಾಶ ನೀಡಲಾಗಿದೆ.
ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಕೌಶಲ ತರಬೇತಿಗಳಿಗೆ ಅವಕಾಶ ನೀಡಲಾಗಿದೆ. ಕನ್ನಡಕ ಶಾಪ್‌ಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2ರ ವರೆಗೆ ತೆರೆಯಬಹುದಾಗಿದೆ.
ಪ್ರಮುಖ ಸರ್ಕಾರಿ ಕಚೇರಿಗಳಲ್ಲಿ ಶೇ 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗಿದೆ.
ಯಾವುದಕ್ಕೆಲ್ಲ ನಿರ್ಬಂಧ: ಅಗತ್ಯ ವಸ್ತು ಹೊರತುಪಡಿಸಿ, ಉಳಿದ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧವಿದೆ. ಕೆಎಸ್ಆರ್ ಟಿಸಿ, ಖಾಸಗಿ ಬಸ್ ಸಂಚಾರ ಇರುವುದಿಲ್ಲ.
ಈಜುಕೊಳ, ಜಿಮ್, ಸಿನಿಮಾ, ಮಾಲ್, ಧಾರ್ಮಿಕ ಕೇಂದ್ರಗಳಿಗೆ ನಿರ್ಬಂಧ ವಿಧಿಸಲಾಗಿದೆ.
ರಾಜಕೀಯ ಧಾರ್ಮಿಕ ಸಾಂಸ್ಕೃತಿಕ ಸಮಾರಂಭಗಳಿಗೆ ನಿರ್ಬಂಧ ಹೇರಲಾಗಿದೆ.
ಖಾಸಗಿ ಅಗತ್ಯ ಸೇವೆ ವ್ಯಾಪ್ತಿಗೆ ಬಾರದ ಸರ್ಕಾರಿ ಕಚೇರಿಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಈ ಮೊದಲು ನಿಗದಿತ ಮದುವೆಗಳನ್ನು ಮನೆಯಲ್ಲಿ ಮಾತ್ರ ನೆರವೇರಿಸಬಹುದಾಗಿದ್ದು, 40 ಜನರಿಗೆ ಮಾತ್ರ ಅವಕಾಶವಿದೆ. ಶವಸಂಸ್ಕಾರ ಅಥವಾ ಅಂತ್ಯಕ್ರಿಯೆ ವೇಳೆ 5 ಜನರಿಗೆ ಮಾತ್ರ ಅವಕಾಶ.
ಜೂನ್ 14 ರಿಂದ 21ರ ವರೆಗೆ ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂ ರಾಜ್ಯ ವ್ಯಾಪ್ತಿ ಏಕರೂಪವಾಗಿ ಅನ್ವಯಿಸಲಾಗಿದೆ.
ಈ ವೇಳೆ ರೋಗಿಗಳು, ಅವರ ಸಹಾಯಕರ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳಿಗೆ ಅವಕಾಶವಿರುತ್ತದೆ. ನೌಕರರು ಐಡಿ ಕಾರ್ಡ್ ತೋರಿಸಿ ಪ್ರಯಾಣಿಸಬೇಕು.
ಟೆಲಿಕಾಂ, ಇಂಟರ್‌ನೆಟ್ ಸಂಸ್ಥೆಗಳ ನೌಕರರು ಮತ್ತು ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ. ಆದರೆ, ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಬೇಕು, ವೈದ್ಯಕೀಯ ತುರ್ತು ಸೇವೆಗಳು ಅಗತ್ಯ ಸೇವೆಗಳಾದ ಫಾರ್ಮಸಿಗಳ ಕಾರ್ಯಾಚರಣೆಗೆ ಯಾವುದೇ ನಿರ್ಬಂಧವಿರುವುದಿಲ್ಲ.
ಸರಕು ಸಾಗಾಟ ವಾಹನಗಳ ಸಂಚಾರಕ್ಕೆ ನಿರ್ಬಂಧ ಇರುವುದಿಲ್ಲ. ಸರಕುಗಳ ಹೋಂ ಡೆಲಿವರಿ, ಇ-ಕಾಮರ್ಸ್ ಚಟುವಟಿಕೆಗಳಿಗೆ ಅವಕಾಶ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
***
ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಪರಸ್ಪರ ಅಂತರದೊಂದಿಗೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು
–ಪಿ.ಸುನೀಲ್‌ಕುಮಾರ್, ಜಿಲ್ಲಾಧಿಕಾರಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.