ವಿಜಯಪುರ: ಇತ್ತೀಚಿಗೆ ಬೀಸಿದ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು ಮೂರು ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಬೆಳೆ ವಿಮಾ ಕಂಪನಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ರಚಿಸಿ ಹಾನಿಗೊಳಗಾದ ಕ್ಷೇತ್ರಗಳಿಗೆ ಭೇಟಿ ನೀಡಿ ನಿಖರವಾದ ಸಮೀಕ್ಷೆ ಕೈಗೊಂಡು 3 ದಿನಗೊಳಗಾಗಿ ಜಂಟಿ ಸಮೀಕ್ಷೆ ನಡೆಸಿ ವರದಿಯನ್ನು ನೀಡಬೇಕು ಎಂದು ಸೂಚಿಸಿದರು.

ಇತ್ತೀಚಿನ ದಿನಗಳಲ್ಲಿ ಬಿದ್ದ ಮಳೆ, ಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ ಬೆಳೆ ಹಾನಿಗೊಳಗಾದ ರೈತರು ಬೆಳೆ ವಿಮೆ ಮಾಡಿಸಿದ್ದರೆ ಅಂತಹ ರೈತರು ಮುಂದಿನ 3 ದಿನಗೊಳಗಾಗಿ (ಮುಂದಿನ 72 ಗಂಟೆಗೂಳಗಾಗಿ) ಓರಿಯಂಟಲ್ ಜನರಲ್ ಇನ್ಶ್ಯೂರನ್ಸ್ ಕಂಪನಿ ಟೋಲ್ ಪ್ರೀ ನಂಬರ್ 1800 425 6678 ಗೆ ಕರೆ ಮಾಡಿ ವೈಯಕ್ತಿಕ ಸ್ಥಳ ನಿರ್ದಿಷ್ಟ ವಿಕೋಪಗಳ ಕುರಿತು ದೂರು ದಾಖಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ದ್ರಾಕ್ಷಿ, ದಾಳಿಂಬೆ ಹಾಗೂ ಲಿಂಬೆ ಬೆಳೆಗಳಿಗೆ ಆಲಿಕಲ್ಲು ಮಳೆಯಿಂದಾಗಿ ಬೆಳೆಹಾನಿ ಸಂಭವಿಸಿದ್ದಲ್ಲಿ, ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾಗೂ ಮಾಹಿತಿಯನ್ನು 72 ಗಂಟೆಗಳೊಳಗಾಗಿ ಅಗ್ರಿಕಲ್ಟರ್ ಇನ್ಸುರನ್ಸ್ ಕಂಪನಿ ಆಪ್ ಇಂಡಿಯಾ ಅವರಿಗೆ ಟೋಲ್ ಪ್ರೀ ನಂಬರ್ 1800 425 0505 ಗೆ ಕರೆ ಮಾಡಿ ರೈತರು ಮಾಹಿತಿ ನೀಡಬಹುದಾಗಿದೆ ಎಂದರು.

ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖಾ ಅಧಿಕಾರಿಗಳು 3 ದಿನಗಳೊಳಗಾಗಿ ಜಂಟಿ ಸಮೀಕ್ಷೆ ಕೈಗೊಂಡು ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-26-2102408218

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.