ಮಂಗಳವಾರ, ಮೇ 17, 2022
26 °C
ಬೊಮ್ಮನಜೋಗಿಯಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ:ಸಿದ್ಧತೆ ಪರಿಶೀಲನೆ

ಅಧಿಕಾರಿಗಳ ಕಡ್ಡಾಯ ಹಾಜರಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ದೇವರ ಹಿಪ್ಪರಗಿ ತಾಲ್ಲೂಕಿನ ಬೊಮ್ಮನಜೋಗಿಯಲ್ಲಿ ಫೆ.20 ರಂದು ಹಮ್ಮಿಕೊಂಡಿರುವ ಗ್ರಾಮ ವಾಸ್ತವ್ಯದ ಅಂಗವಾಗಿ ಗ್ರಾಮಸ್ಥರಿಂದ ಸ್ವೀಕರಿಸಲಾದ ಕುಂದು ಕೊರತೆ ಮನವಿಗಳ ಬಗ್ಗೆ ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಗ್ರಾಮವಾಸ್ತವ್ಯದಲ್ಲಿ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಈಗಾಗಲೇ ಸ್ವೀಕರಿಸಿದ ಗ್ರಾಮಸ್ಥರ ಕುಂದುಕೊರತೆಗಳ ಮೇಲಿನ ಕ್ರಮಗಳ ಜೊತೆಗೆ ಪ್ರತ್ಯೇಕ ಕೌಂಟರ್ ಸ್ಥಾಪಿಸಿ, ಮನವಿ ಪತ್ರಗಳನ್ನು ಸಹ ಪಡೆಯಲು ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ಅರ್ಹ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು, ಪಿಂಚಣಿ ಜಮೆಯಾದ ಬಗ್ಗೆ ಪರಿಶೀಲಿಸಬೇಕು, ಪ್ರತಿ ಪಿಂಚಣಿ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದರು.

ಕ್ರಿಯಾಯೋಜನೆಯನ್ವಯ ರಸ್ತೆಗಳಿಗೆ ಅನುದಾನ ಖರ್ಚು, ಆಶ್ರಯ ಮನೆಗಳ ಸೌಲಭ್ಯ, ಕೊಳವೆ ಬಾವಿಗಳ ಸೌಲಭ್ಯ, ಅಂಗವಿಕಲರಿಗೆ ತ್ರಿಚಕ್ರವಾಹನ ಸಹಾಯಧನ ಸೌಲಭ್ಯ, ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥಿ, ಶಿಕ್ಷಣ ಇಲಾಖೆ ಸೇರಿದಂತೆ ಗ್ರಾಮ ಪಂಚಾಯ್ತಿ ವ್ಯಾಪ್ತಿ ಮತ್ತು ಗ್ರಾಮಸ್ಥರ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.

ಯಾವುದೇ ರೀತಿಯ ಲೋಪಕ್ಕೆ ಅವಕಾಶ ನೀಡದೆ ಸಾರ್ವಜನಿಕರಿಗೆ ಸಕಾಲಕ್ಕೆ ಸ್ಪಂದಿಸುವ ಮೂಲಕ ಗ್ರಾಮ ವಾಸ್ತವ್ಯದ ಯಶಸ್ಸಿಗೆ ಸಹಕರಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು