ಗುರುವಾರ , ಅಕ್ಟೋಬರ್ 29, 2020
20 °C

ವಿಜಯಪುರ: ಗಾಂಜಾ ಬೆಳೆದಿದ್ದ ತಂದೆ, ಮಗನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಿಂಬೆ ಮತ್ತು ಬಾಳೆ ತೋಟದಲ್ಲಿ ರೈತರು ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ವಿಜಯಪುರ: ಸಿಂದಗಿ ತಾಲ್ಲೂಕಿನ ಬಳಗಾನೂರ ಗ್ರಾಮದಲ್ಲಿ ನಿಂಬೆ ಮತ್ತು ಬಾಳೆ ತೋಟದಲ್ಲಿ ರೈತರು ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಬಳಗಾನೂರ ಗ್ರಾಮದ ಅರವಿಂದ ಮದರಿ(54) ಮತ್ತು ಅವರ ಮಗ ಪ್ರವೀಣ ಮದರಿ(25) ಬಂಧಿತ ಆರೋಪಿಗಳು. ಇವರು ತಮ್ಮ ಹೊಲದಲ್ಲಿ ಬೆಳೆದಿದ್ದ ಸುಮಾರು 46 ಕೆ.ಜಿ. ಹಸಿ ಗಾಂಜಾ ಮತ್ತು ಮೂರು ಕೆ.ಜಿ.ಒಣ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡು, ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸ್‌ ಇನ್‌ಸ್ಪೆಕ್ಟರ್‌ ಸುನೀಲ ಕಾಂಬಳೆ ನೇತೃತ್ವದ ಪೊಲೀಸರು ದಾಳಿ ನಡೆಸಿ, ವಶಪಡಿಸಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು