ವಿಜಯಪುರ: ‘ಯೋಜನೆಗಳಿಗೆ ಪೂರಕವಾಗಿ ಸಕಾಲಕ್ಕೆ ಕೆಲಸ ಮಾಡಿದರೆ ಯಾವುದೇ ಸಮಸ್ಯೆಗಳು ಬರುವುದಿಲ್ಲ. ಹಾಗಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯ ಸಾಧಿಸಿ ಕೆಲಸ ಮಾಡಿದರೆ ಎಲ್ಲ ಅಂಶಗಳಲ್ಲೂ ಪ್ರಗತಿ ಹೊಂದಲು ಸಾಧ್ಯ’ ಎಂದು ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.

ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ‘ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ತೆರಳಿ, ಪ್ರಾಮಾಣಿಕವಾಗಿ ಕೆಲಸ ಮಾಡಿ’ ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸಲಹೆ ನೀಡಿದರು.

‘ಎರಡು ತಾಲ್ಲೂಕಿಗೆ ನಿಗದಿಪಡಿಸಿರುವ ಮಾನವ ದಿನಗಳನ್ನು ಮೇ ತಿಂಗಳ ಅಂತ್ಯದಲ್ಲಿ ಪೂರ್ಣಗೊಳಿಸಬೇಕು. ಪ್ರಸ್ತುತ ಹಾಗೂ ಬಾಕಿ ಉಳಿದ ನರೇಗಾ ಕೂಲಿಕಾರರ ಕೂಲಿಯನ್ನು ಸಕಾಲದಲ್ಲಿ ಪಾವತಿಸಬೇಕು. ಎಲ್ಲಾ ನರೇಗಾ ಕೂಲಿಕಾರರ ಇ–ಕೆವೈಸಿ ಶೇ100ರಷ್ಟು ಪ್ರಗತಿ ಸಾಧಿಸಬೇಕು’ ಎಂದರು.

‘ನರೇಗಾ ಯೋಜನೆಯಡಿ ಅಪೂರ್ಣಗೊಂಡ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ನಮೂನೆ-6 ರಲ್ಲಿ ಬೇಡಿಕೆ ಸಲ್ಲಿಸಿದ ಎಲ್ಲಾ ಕೂಲಿಕಾರರಿಗೆ ಉದ್ಯೋಗ ಒದಗಿಸಬೇಕು. ವಿವಿಧ ಯೋಜನೆಗಳಲ್ಲಿ ನಿಗದಿತ ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು’.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ಮುದ್ದೇಬಿಹಾಳ ತಾಲ್ಲೂಕು ಪಂಚಾಯಿತಿ ಇಒ ಸಂಗನಗೌಡ, ತಾಳಿಕೋಟಿ ತಾಲ್ಲೂಕು ಪಂಚಾಯಿತಿ ಇಒ ಅನಸೂಯ ಚಲವಾದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-26-1274388944

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.