ವಿಜಯಪುರ: ಏ.16 ರಿಂದ ಮೇ 15 ರವರೆಗೆ ನಡೆಯುವ ಜನಗಣತಿಯಲ್ಲಿ ಜಿಲ್ಲೆಯ ಯಾವೊಂದು ಕುಟುಂಬವೂ ಜನಗಣತಿಯಿಂದ ಹೊರುಗುಳಿಯಬಾರದು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹೇಳಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ. 2 ಹಂತಗಳಲ್ಲಿ ನಡೆಯಲಿರುವ ಗಣತಿ ಕಾರ್ಯವನ್ನು ಸ್ವತಃ ಗಣತಿದಾರರು ವಿಶೇಷ ಕಾಳಜಿ ವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದರು.

ಈಗಾಗಲೇ ಸ್ವಯಂ ಗಣತಿ ಕಾರ್ಯ ಆರಂಭವಾಗಿದೆ. ಜನಗಣತಿಯ ಸುರಕ್ಷಿತ ವೆಬ್ ಪೋರ್ಟಲ್: https://se.census.gov.in ಗೆ ಮೊಬೈಲ್ ಸಂಖ್ಯೆ ಮತ್ತು ಒಟಿಪಿ ಬಳಸಿ ಲಾಗಿನ್ ಆಗಿ. ಬಳಿಕ ನಿಮ್ಮ ಸ್ಥಳ ಆಯ್ಕೆ ಮಾಡಿ. ನಕ್ಷೆಯಲ್ಲಿ ನಿಮ್ಮ ಮನೆ ಗುರುತಿಸಿ. ಬಳಿಕ ಮನೆಯ ಇಲ್ಲವೇ ಕುಟುಂಬದ ವಿವರ ಭರ್ತಿ ಮಾಡಿ, ನಿಮ್ಮ SEID Reference ಐಡಿ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದರು.

ನಿಮ್ಮ SEID ಅನ್ನು ಸುರಕ್ಷಿತವಾಗಿ ಇಟ್ಟು, Enumerator ಮನೆಗೆ ಬಂದಾಗ ಅದನ್ನು ಅವರೊಂದಿಗೆ ಹಂಚಿಕೊಳ್ಳಬೇಕು. ಒಂದು ವೇಳೆ ಸಾರ್ವಜನಿಕರು ಸ್ವಯಂ ಗಣತಿ ಪೂರ್ಣಗೊಳಿಸದಿದ್ದರೆ, ಅಂತವರ ಸ್ವಯಂ ಗಣತಿಯನ್ನು ಗಣತಿದಾರರೇ ಮಾಹಿತಿ ಸಂಗ್ರಹಿಸಿ ಗಣತಿ ಕಾರ್ಯ ಯಶಸ್ವಿಗೊಳಿಸಲಿದ್ದಾರೆ ಎಂದರು.

ಈ ಹಂತದಲ್ಲಿ ಸಾರ್ವಜನಿಕರ ಮಾಹಿತಿಯನ್ನು ಶೇ 100ರಷ್ಟು ಗೌಪ್ಯತೆ ಇದ್ದು, ಸ್ವಯಂ ಗಣತಿಯನ್ನು ಪೂರ್ಣಗೊಳಿಸುವಂತೆ ಗಣತಿದಾರರಿಗೆ ಸೂಚನೆ ನೀಡಲಾಗಿದೆ. ಆಯಾ ಕುಟುಂಬದ ಮುಖ್ಯಸ್ಥರು ತಮ್ಮ ಕುಟುಂಬದ ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ, ಅವರಿಗೆ ಒಂದು ವಿಶಿಷ್ಟ ಸ್ವಯಂ-ಗಣತಿ ಐಡಿ (Self-Enumeration ID) ನೀಡಲಾಗುತ್ತದೆ. ಈ ಐಡಿಯನ್ನು ಎಸ್ ಎಂಎಸ್ ಮತ್ತು ಇಮೇಲ್ ಮೂಲಕ ಕಳುಹಿಸಲಾಗುತ್ತದೆ. ಅದನ್ನು ಮನೆಗೆ ಭೇಟಿ ನೀಡುವ ಗಣತಿದಾರರಿಗೆ (Enumerator) ಆ ಐಡಿಯನ್ನು ಹಂಚಿಕೊಂಡು ಜನಗಣತಿ ಯಶಸ್ವಿಗೊಳಿಸಬೇಕು ಎಂದರು.

ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಇದು ಸಂಪೂರ್ಣ ಡಿಜಿಟಲ್ ಪ್ರಥಮ ಜನಗಣತಿಯಾಗಿದೆ. ಏಪ್ರಿಲ್ 1ರಿಂದ ಏಪ್ರಿಲ್ 15ರ ವರಗೆ ಸ್ವಯಂ ಗಣತಿ ಕಾರ್ಯ ಪ್ರಗತಿಯಲ್ಲಿದೆ. ಏ.16 ರಿಂದ ಮೇ 16 ರವರೆಗೆ ಮನೆ ಪಟ್ಟಿ ಕ್ಷೇತ್ರ ಕಾರ್ಯ ನಡೆಯಲಿದೆ ಎಂದರು.

ಎರಡನೇ ಹಂತದಲ್ಲಿ ಫೆಬ್ರವರಿ 2027 ರಿಂದ ಜನಸಂಖ್ಯಾ ಗಣತಿ ಕಾರ್ಯ ನಡೆಯಲಿದೆ ಎಂದು ಹೇಳಿದರು.

ಜನಗಣತಿ ಸಲುವಾಗಿ ಬ್ಲಾಕ್ ರಚಿಸಲಾಗುತ್ತಿದ್ದು, 150 ರಿಂದ 200 ಮನೆಗಳು ಅಥವಾ 700 ರಿಂದ 800 ಜನಸಂಖ್ಯೆಗನುಗುಣವಾಗಿ ಒಬ್ಬ ಗಣತಿದಾರರನ್ನು ಪ್ರತಿ 6 ಜನ ಗಣತಿದಾರರಿಗೆ ಒಬ್ಬ ಮೇಲ್ವಿಚಾರಕರನ್ನು ನೇಮಿಸಲಾಗುವುದು. ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲಿ 2846, ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 624 ಹಾಗೂ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 565 ಬ್ಲಾಕ್ ಸೇರಿದಂತೆ ಒಟ್ಟಾರೆ ಜಿಲ್ಲೆಯಲ್ಲಿ 4,035 ಬ್ಲಾಕ್ ಗಳ ರಚನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 4405 ಗಣತಿದಾರರನ್ನು ಹಾಗೂ 767 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಹೇಳಿದರು.

ಜನಗಣತಿ ಅಧಿಕಾರಿಯು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಸಹಕರಿಸುವಂತೆಯೂ ಹಾಗೂ ಜಿಲ್ಲೆಯಲ್ಲಿ ಭಾರತ ಜನಗಣತಿ 2027 ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-26-1046979892

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.