ವಿಜಯಪುರ: ಜಿಲ್ಲೆಯಾದ್ಯಂತ ಇರುವ ಶಿಥಿಲಾವಸ್ಥೆಯ ಮನೆಗಳ ತುರ್ತು ಸಮೀಕ್ಷೆಗೆ ಒತ್ತಾಯಿಸಿ ದಲಿತ ಸ್ವರಾಜ್ಯ ಸೇನೆ-ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಶನಿವಾರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯ ಆಲಮೇಲ ತಾಲ್ಲೂಕಿನ ಮೊರಟಗಿ ಗ್ರಾಮದಲ್ಲಿ ಇತ್ತೀಚೆಗೆ ಮಳೆಯ ಅಬ್ಬರಕ್ಕೆ ಹಳೆ ಕಚ್ಚಾ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆಯು ಜಿಲ್ಲಾಡಳಿತ ಮತ್ತು ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಸಂಘಟನೆಯ ಪದಾಧಿಕಾರಿಗಳು ತೀವ್ರ ಅಸಮಾಧಾನ ಹೊರಹಾಕಿದರು.

ಆರ್ಥಿಕ ಸಮೀಕ್ಷೆ 2024-25ರ ವರದಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ಜಿಲ್ಲೆಯಲ್ಲಿ ಇಂದಿಗೂ ಸುಮಾರು 45 ಸಾವಿರದಿಂದ 55 ಸಾವಿರ ಕುಟುಂಬಗಳು ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಇಂತಹ ಮನೆಗಳಲ್ಲಿ ಮಳೆಗಾಲದಲ್ಲಿ ವಾಸಿಸುವುದು ಅಪಾಯವಿದ್ದಂತೆ, ಪುನರ್ ವಸತಿ ಕಾರ್ಯಕ್ಕೆ ಜಿಲ್ಲಾಡಳಿತ ಶರವೇಗದಲ್ಲಿ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸಿದ್ದಾರೆ.

ಮೊರಟಗಿ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ ತಲಾ ₹ 25 ಲಕ್ಷ ಪರಿಹಾರ ಧನ ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡುವುದು, ಜಿಲ್ಲೆಯಾದ್ಯಂತ ಶಿಥಿಲಾವಸ್ಥೆಯಲ್ಲಿರುವ ಮತ್ತು ಬೀಳುವ ಹಂತದಲ್ಲಿರುವ ಮನೆಗಳ ಬಗ್ಗೆ ತಕ್ಷಣವೇ ಸಮಗ್ರ ಸಮೀಕ್ಷೆ ನಡೆಸಿ ಅಪಾಯಕಾರಿ ಮನೆಗಳಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ಸ್ಥಳಾಂತರಿಸಿ, ಹೊಸ ಮನೆ ನಿರ್ಮಿಸಿಕೊಡಲು ವಿಶೇಷ ವಸತಿ ಯೋಜನೆಯಡಿ ಅನುದಾನ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಮಂಡಿಸಿದರು.

ಅಮೃತ್ ಮಾವಿನಹಳ್ಳಿ, ಪರಶುರಾಮ್ ಕರವಿನಾಳ, ತಿಪ್ಪಣ್ಣ ಡಿ, ಪ್ರಕಾಶ್ ಶಬರದ, ಮೆಹಬೂಬ್ ಮುಜಾವರ್, ಪ್ರಶಾಂತ್ ಗದ್ದರಿಗಿ, ಸುಭಾಷ್ ಪಾಂಡ್ರೆ, ಅರುಢ ಸ್ವಾಮಿ ಕಬಾಡೆ, ಹುಲಗೇಪ್ಪ ಹಂದ್ರಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-26-1191920969

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.