ವಿಜಯಪುರ: ಮುಂಗಾರು ಹಿನ್ನೆಲೆಯಲ್ಲಿ ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಮುಖ ನಾಲೆಗಳು ಹಾಗೂ ತಗ್ಗು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ನವಬಾಗ್ ರಸ್ತೆ, ಜನ್ನಥ್ ಫಂಕ್ಷನ್ ಹಾಲ್ ಸಮೀಪದ ಕೋಟೆಗೋಡೆ ಕಂದಕ, ರಾಮನಗರ ರಸ್ತೆ, ಕಸ್ತೂರಿ ಕಾಲೊನಿ ಕೋಟೆಗೋಡೆ ಕಂದಕ ಹಾಗೂ ರೂಡಗಿ ಮಡ್ಡಿ ಸ್ಮಶಾನ ಸಮೀಪ ಎಸ್ಡಿಎಂಎಫ್ ನಿಧಿಯ ಅಡಿ ಕೈಗೊಳ್ಳಲಾಗುತ್ತಿರುವ ಕಂದಕ, ಹೂಳೆತ್ತುವ ಕಾಮಗಾರಿಗಳನ್ನು ಪರಿಶೀಲಿಸಿದರು.

ಮಳೆಗಾಲದ ನಿಮಿತ್ತ ನಗರದಲ್ಲಿಯ ಎಲ್ಲ ಮಳೆ ನೀರು ಹರಿವಿನ ಚರಂಡಿಗಳು, ನಾಲೆಗಳು ಹಾಗೂ ಕೋಟೆಗೋಡೆ ಕಂದಕಗಳನ್ನು ಸಮಗ್ರ ಸ್ವಚ್ಛತೆ ಮತ್ತು ಹೂಳೆತ್ತುವ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕು. ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಜೆಸಿಬಿ ಯಂತ್ರಗಳು, ಡೀ-ವಾಟರಿಂಗ್ ಪಂಪ್ಗಳು, ಅಗತ್ಯ ಉಪಕರಣಗಳು ಹಾಗೂ ಸಿಬ್ಬಂದಿಯನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿ ಇರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.

ನಗರದಲ್ಲಿ ಗುರುತಿಸಲಾದ ತಗ್ಗು ಪ್ರದೇಶಗಳಲ್ಲಿ ಮಳೆಯಿಂದ ಉಂಟಾಗಬಹುದಾದ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸಲು ಪ್ರತ್ಯೇಕ ತಂಡಗಳನ್ನು ರಚಿಸಿ ಕಾರ್ಯ ನಿರ್ವಹಿಸಬೇಕು. ಎಂ.ಜಿ.ಎನ್.ವಿ.ವೈ ಯೋಜನೆಯಡಿ ಕೈಗೊಳ್ಳಬೇಕಿರುವ ಕಾಮಗಾರಿಗಳನ್ನು ತಕ್ಷಣ ಆರಂಭಿಸಿ, ವಿಶೇಷವಾಗಿ ಮಳೆ ನೀರು ಹರಿವಿನ ಚರಂಡಿ ಕಾಮಗಾರಿಗಳಿಗೆ ಆದ್ಯತೆ ನೀಡಿ ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಮಳೆಯಿಂದ ಉದ್ಭವಿಸಬಹುದಾದ ಸಮಸ್ಯೆಗಳನ್ನು ಮುಂಚಿತವಾಗಿ ಗುರುತಿಸಿಟ್ಟುಕೊಂಡು ಪ್ರದೇಶವಾರು ಪರಿಶೀಲನೆ ನಡೆಸುವಂತೆಯೂ ಸೂಚಿಸಿದರು.

ಆಯಾ ವಾರ್ಡ್ ಸದಸ್ಯರು, ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಕಾರ್ಯಪಾಲಕ ಎಂಜಿನಿಯರ್, ಮಹಾನಗರ ಪಾಲಿಕೆಯ ಇತರ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-26-1587618244

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.