ವಿಜಯಪುರ: ‘ನಗರದ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅವ್ಯವಸ್ಥೆಯಿಂದ ರೋಗಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಕನಿಷ್ಠ ಮೂಲಸೌಕರ್ಯಗಳನ್ನೂ ಕಲ್ಪಿಸಲಾಗಿಲ್ಲ’ ಎಂದು ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

‘ಇಂಡಿ, ಮುದ್ದೇಬಿಹಾಳ, ಸಿಂದಗಿ ತಾಲ್ಲೂಕು, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿಂದ ಹಾಗೂ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಜತ್ತ ಜಿಲ್ಲೆಗಳಿಂದ ಪ್ರತಿದಿನ 3 ಸಾವಿರಕ್ಕೂ ಹೆಚ್ಚು ಹೊರರೋಗಿಗಳು ಬರುತ್ತಿದ್ದರೂ ಸೌಲಭ್ಯ ಮರೀಚಿಕೆಯಾಗಿದೆ’ ಎಂದು ಆರೋಪಿಸಿದರು.

‘ಜಿಲ್ಲಾಸ್ಪತ್ರೆಯಲ್ಲಿ ಎಂಆರ್ಐ, ಸಿಟಿ ಸ್ಕ್ಯಾನ್, ಸೂಪರ್ ಸ್ಪೆಷಾಲಿಟಿ ಕಟ್ಟಡ, ಪಂಚಕರ್ಮ ಚಿಕಿತ್ಸಾಲಯ, 670 ಹಾಸಿಗೆಗಳ ಜನರಲ್ ಆಸ್ಪತ್ರೆ, 150 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ, 60 ಹಾಸಿಗೆಗಳ ಟ್ರಾಮಾ ಸೆಂಟರ್, ತುರ್ತು ನಿಗಾ ಘಟಕ, ಆಮ್ಲಜನಕ ಘಟಕ ಹಾಗೂ ಹೈಟೆಕ್ ಶವಾಗಾರಗಳಂತಹ ಅತ್ಯಾಧುನಿಕ ಸೌಲಭ್ಯಗಳಿದ್ದರೂ ರೋಗಿಗಳಿಗೆ ಚೀಟಿ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದೆ’ ಎಂದು ದೂರಿದರು.

‘ರೋಗಿಗಳು ಮೂರು, ನಾಲ್ಕು ತಾಸು ಸರತಿ ಸಾಲಿನಲ್ಲಿ ನಿಂತರೂ ಚೀಟಿ ಸಿಗದೆ ಬೇಸರದಿಂದ ವಾಪಸ್ ಊರಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಆರೋಪಿಸಿದರು.

‘ವಯಸ್ಸಾದವರು, ಗರ್ಭಿಣಿ ಮಹಿಳೆಯರು, ಬಾಣಂತಿಯರು ಮತ್ತು ಮಕ್ಕಳು ಬಿಸಿಲಿನಲ್ಲಿ ನಿಂತು ಪರಿತಪಿಸುತ್ತಿದ್ದಾರೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಾಕಷ್ಟು ಜಾಗ ಇದ್ದರೂ ಕೌಂಟರ್ಗಳನ್ನು ಮುಚ್ಚಿ ಎಲ್ಲ ರೋಗಿಗಳನ್ನು ಒಂದೇ ಕಡೆಗೆ ಕಳಿಸುವುದರಿಂದ ನೂಕುನುಗ್ಗಲು ಹೆಚ್ಚಾಗಿ ತೊಂದರೆಯಾಗುತ್ತಿದೆ’ ಎಂದು ಆಕ್ಷೇಪಿಸಿದರು.

ಪ್ರಮುಖ ಬೇಡಿಕೆಗಳು: ‘ಕೂಡಲೇ ಅಗತ್ಯಕ್ಕೆ ತಕ್ಕಷ್ಟು ಹೆಚ್ಚುವರಿ ಕೌಂಟರ್ಗಳನ್ನು ತೆರೆಯಬೇಕು, ಎಲ್ಲ ರೋಗಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಆಸ್ಪತ್ರೆಯಲ್ಲೇ ಮಾಡುವ ವ್ಯವಸ್ಥೆ ಕಲ್ಪಿಸಬೇಕು, ಎಲ್ಲ ಅಗತ್ಯ ಔಷಧಗಳನ್ನು ರೋಗಿಗಳಿಗೆ ಉಚಿತವಾಗಿ ಒದಗಿಸಬೇಕು, ಚೀಟಿ ಪಡೆಯುವ ಸರತಿ ಸಾಲಿನಲ್ಲಿ ರೋಗಿಗಳಿಗೆ ನೆರಳು, ಕುರ್ಚಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು, ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಪ್ರತ್ಯೇಕ ಕೌಂಟರ್ಗಳನ್ನು ತಕ್ಷಣ ತೆರೆಯಬೇಕು, ಯಾವುದೇ ಪಾರ್ಕಿಂಗ್ ದರ ಇರಕೂಡದು ಹಾಗೂ ಅದನ್ನು ಸಂಪೂರ್ಣ ರದ್ದು ಮಾಡಬೇಕು’ ಎಂದು ಆಗ್ರಹಿಸಲಾಗಿದೆ.

ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಸದಸ್ಯರಾದ ಬಿ. ಭಗವಾನ್ ರೆಡ್ಡಿ, ಅರವಿಂದ್ ಕುಲಕರ್ಣಿ, ಲಲಿತಾ ಬಿಜ್ಜರಗಿ, ಮಲ್ಲಿಕಾರ್ಜುನ್ ಬಟಗಿ, ಬಾಬುರಾವ ಬೀರಕಬ್ಬಿ, ಸುರೇಶ್ ಬಿಜಾಪುರ, ಸಿದ್ದಲಿಂಗ ಬಾಗೇವಾಡಿ, ಭರತ ಕುಮಾರ್ ಎಚ್.ಟಿ., ಮಲ್ಲಿಕಾರ್ಜುನ್ ಎಚ್.ಟಿ., ಗೀತಾ ಎಚ್., ನೀಲಂಬಿಕಾ ಬಿರಾದಾರ, ಲಿಂಗರಾಜ ಬಿದರಕುಂದಿ, ಸಂತೋಷ್ ನಾಯಕ್, ಭೀಮು ಉಪ್ಪಾರ, ಜಗದೇವ್ ಸೂರ್ಯವಂಶಿ, ಡಾ. ಗುರಿಕರ್, ಸುಶೀಲಾ ಮಿಣಜಗಿ, ಜ್ಯೋತಿ ಮಿಣಜಗಿ, ಭಾಗ್ಯ ಮಿಣಜಗಿ, ಸಲಿಂ ಹೊಕ್ಕರಣಿ, ಭೋಗೇಶ್ ಸೋಲಾಪುರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-26-235227378

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.