ವಿಜಯಪುರ: ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಲ್ಬಣಿಸಬಹುದಾದ 11 ತಾಲ್ಲೂಕುಗಳ 38 ಗ್ರಾಮ ಪಂಚಾಯಿತಿ ವ್ಯಾಪ್ತಿಯ 65 ಗ್ರಾಮಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ನೀರಿನ ಯಾವುದೇ ಸಮಸ್ಯೆ ಉಂಟಾಗದಂತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಆಲಮಟ್ಟಿ ಜಲಾಶಯದಲ್ಲಿ ಪ್ರಸ್ತುತ 34.895 ಟಿಎಂಸಿ ನೀರು ಲಭ್ಯವಿದೆ. ನಾರಾಯಣಪುರ ಜಲಾಶಯದಲ್ಲಿ ಪ್ರಸ್ತುತ 21.269 ಟಿಎಂಸಿ ನೀರು ಲಭ್ಯವಿದೆ. ಜಿಲ್ಲೆಯ ಬೇಡಿಕೆಯಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಇಂಡಿ ತಾಲ್ಲೂಕಿನ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಲುವಾಗಿ ಇಂಡಿ ಶಾಖಾ ಕಾಲುವೆಯಿಂದ 1 ಟಿಎಂಸಿ ನೀರನ್ನು ಏ. 11 ರಿಂದ ಏ. 23 ರವರೆಗೆ (12 ದಿನಗಳು) ನಿತ್ಯ ಒಂದು ಸಾವಿರ ಕ್ಯೂಸೆಕ್ ನಂತೆ ಹರಿಸಲು ಆದೇಶಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ ಎಂದು ಹೇಳಿದರು.

ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ 160 ಕೆರೆಗಳಿದ್ದು, ಅವುಗಳಲ್ಲಿ 66 ಕೆರೆಗಳು ಶೇ 30 ರಷ್ಟು, 43 ಕೆರೆಗಳು ಶೇ 31 ರಿಂದ 50 ರವರೆಗೆ ಹಾಗೂ 51 ಕೆರೆಗಳು ಶೇ 51 ರಿಂದ 99 ರವರೆಗೆ ಭರ್ತಿಯಾಗಿವೆ ಎಂದರು.

ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ 40 ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗಳಿದ್ದು, ಆಲಮಟ್ಟಿ ಜಲಾಶಯ ವ್ಯಾಪ್ತಿಯಲ್ಲಿ 10, ನಾರಾಯಣಪುರ ಜಲಾಶಯ ವ್ಯಾಪ್ತಿಯಲ್ಲಿ 8, ಭೀಮಾ ನದಿ ಮೂಲಕ 5 ಹಾಗೂ ಕಾಲುವೆ ಮುಖಾಂತರ 17 ಬಹು ಹಳ್ಳಿ ಕುಡಿಯುವ ನೀರಿನ ಯೋಜನೆ (ಎಂವಿಎಸ್) ಗಳು ಅವಲಂಬಿತವಾಗಿರುತ್ತವೆ. ಈ ಯೋಜನೆಗಳಡಿ ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದರು.

ಜಿಲ್ಲೆಯ ನಗರ ಪ್ರದೇಶಗಳಿಗೆ ಸರಬರಾಜು ಮಾಡುತ್ತಿರುವ ನೀರಿನ ಮೂಲಗಳಲ್ಲಿ ಪ್ರಸ್ತುತ ಸಾಕಷ್ಟು ನೀರು ಲಭ್ಯವಿರುತ್ತದೆ. ಹಾಗಾಗಿ ಎಲ್ಲಿಯೂ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು, ತಾಲ್ಲೂಕು ಮಟ್ಟದಲ್ಲಿ ಕಾರ್ಯ ಪಡೆ(ಟಾಸ್ಕ್ ಪೋರ್ಸ್) ಸಭೆಗಳನ್ನು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ವಿಪತ್ತು ನಿರ್ವಹಣಾ ಸಮಿತಿ ಸಭೆಗಳನ್ನು ಜರುಗಿಸಿಕುಡಿಯುವ ನೀರಿನ ಯಾವುದೇ ಸಮಸ್ಯೆಯಾಗದಂತೆ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-26-1376882672

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.