ವಿಜಯಪುರ: ವೈದ್ಯರ ಚೀಟಿ ಇಲ್ಲದೆ ಮಾದಕ ಅಂಶವಿರುವ ಔಷಧಗಳನ್ನು ಮಾರಾಟ ಮಾಡುವ ಔಷಧ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ತಿಳಿಸಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ವಸ್ತು ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ವೈದ್ಯರ ಚೀಟಿ ಇಲ್ಲದೇ ಯಾವ ಕಾರಣಕ್ಕೂ ಔಷಧಗಳನ್ನು ನೀಡುವಂತಿಲ್ಲ. ಯುವ ಜನಾಂಗ ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಲು ಇಲಾಖಾಧಿಕಾರಿಗಳು ಸಮನ್ವಯತೆ ಹಾಗೂ ಸಹಕಾರದಿಂದ ಕಾರ್ಯನಿರ್ವಹಿಸುವಂತೆ’ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲ ವಸತಿ ನಿಲಯಗಳು ಹಾಗೂ ಶಾಲೆ-ಕಾಲೇಜುಗಳಲ್ಲಿ ನಿಗಾ ವಹಿಸಿ, ಮಾದಕ ವಸ್ತು ನಿಯಂತ್ರಣ ಕೋಶಗಳನ್ನು ರಚಿಸಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಿದರು. ವಿದ್ಯಾರ್ಥಿಗಳಿಂದಲೇ ಸಮಿತಿಗಳನ್ನು ರಚಿಸಿ ಜಾಗೃತಿ ಅಭಿಯಾನಗಳನ್ನು ನಡೆಸಬೇಕು ಎಂದರು. ಅರಣ್ಯ ಪ್ರದೇಶಗಳಲ್ಲಿ ಗಾಂಜಾ ಬೆಳೆ ಕಂಡುಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಅಕ್ರಮವಾಗಿ ಮಾದಕ ದ್ರವ್ಯ ಮಾರಾಟ ಅಥವಾ ಸಂಗ್ರಹದ ಬಗ್ಗೆ ಮಾಹಿತಿ ದೊರೆತ ಕೂಡಲೇ ಪೊಲೀಸ್ ಇಲಾಖೆಗೆ ವರದಿ ಮಾಡುವಂತೆ ಅಬಕಾರಿ ಇಲಾಖೆಗೆ ತಿಳಿಸಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ಸಭೆಗೆ ವಿವರಿಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾತನಾಡಿ, ಗಾಂಜಾ ಸೇರಿದಂತೆ ಮಾದಕ ವಸ್ತುಗಳ ನಿಯಂತ್ರಣಕ್ಕೆ ಜಾಗೃತಿ ಹಾಗೂ ಕಾನೂನು ಕ್ರಮಗಳನ್ನು ಬಲಪಡಿಸಲಾಗುತ್ತಿದೆ ಎಂದರು. ಕಳೆದ ವರ್ಷಗಳಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಹಲವಾರು ಪ್ರಕರಣಗಳು ದಾಖಲಾಗಿದ್ದು, ಗಣನೀಯ ಪ್ರಮಾಣದ ಗಾಂಜಾ ಮತ್ತು ಅಫೀಮು ವಶಪಡಿಸಿಕೊಂಡು ನಾಶಪಡಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ 13 ಪ್ರಕರಣಗಳು ದಾಖಲಾಗಿದ್ದು, ಸುಮಾರು 9.5 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರಿಗೆ ದಂಡ ವಿಧಿಸಿ, ಪುನರಾವರ್ತನೆಯಾದಲ್ಲಿ ಲೈಸೆನ್ಸ್ ರದ್ದುಪಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿಗಳಾದ ಚಿದಾನಂದ ಗುರುಸ್ವಾಮಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿಕಾರ್ಜುನ ಕುಸುನಾಳ, ಪಾಲಿಕೆಯ ಉಪ ಆಯುಕ್ತರಾದ ಮಹಾವೀರ ಬೋರಣ್ಣವರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾ ಕಾಳೆ, ಪೀಟರ್ ಅಲೆಕ್ಸಾಂಡರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-26-43880923

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.