ವಿಜಯಪುರ: ‘ಎಸ್ಸಿಎಸ್ಪಿ–ಟಿಎಸ್ಪಿಯಡಿ ಮಾರ್ಚ್ ಅಂತ್ಯದವರೆಗೆ ನಿಗದಿಪಡಿಸಿದ ಆರ್ಥಿಕ ಮತ್ತು ಭೌತಿಕ ಗುರಿ ಸಾಧಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿ ಅನುಷ್ಠಾನಗೊಳಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ 2025–2026ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯದ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

'ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆಯಡಿ ನಿಗದಿತ ಅವಧಿಯಲ್ಲಿ ಅನುದಾನ ಸದ್ಬಳಕೆ ಮಾಡಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕಿಸಲು ಸಂಬಂಧಿಸಿದ ಅಧಿಕಾರಿಗಳು ಶ್ರಮಿಸಬೇಕು. ಯೋಜನೆಗಳ ಕುರಿತು ಸಮಗ್ರವಾಗಿ ಚರ್ಚಿಸಲು ಅಗತ್ಯ ಮಾಹಿತಿಯೊಂದಿಗೆ ಅಧಿಕಾರಿಗಳು ಸಭೆಗೆ ಹಾಜರಾಗಬೇಕು. ಇಲಾಖೆಯ ಪ್ರತಿನಿಧಿಗಳನ್ನು ಕಳುಹಿಸಬಾರದು’ ಎಂದು ಸೂಚಿಸಿದರು.

‘ಯೋಜನೆಯ ಅನುದಾನ ವಾಪಸ್ ಹೋಗದಂತೆ ಸೂಕ್ತ ರೀತಿಯಲ್ಲಿ ಕ್ರಿಯಾಯೋಜನೆ ರೂಪಿಸಬೇಕು. ಸೌಲಭ್ಯ ತಲುಪಿಸುವಲ್ಲಿ ವಿಳಂಬ ಆಗಬಾರದು’ ಎಂದರು.

ತೋಟಗಾರಿಕೆ, ಮೀನುಗಾರಿಕಾ, ಪಶುಸಂಗೋಪನಾ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹೆಸ್ಕಾಂ, ಕೃಷಿ ಸೇರಿದಂತೆ ವಿವಿಧ ಇಲಾಖೆಯ 2025ರ ಡಿಸೆಂಬರ್ ಅಂತ್ಯದವರೆಗಿನ ಆರ್ಥಿಕ ಮತ್ತು ಭೌತಿಕ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರಾಹುಲ ಭಾವಿದೊಡ್ಡಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ಕಾರ್ಮಿಕ ಇಲಾಖೆ ಅಧಿಕಾರಿ ಉಮಾಶ್ರೀ ಕೊಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.