ತಾಳಿಕೋಟೆ: ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರವನ್ನು ಸರ್ಕಾರ ನಿಗದಿಗೊಳಿಸಿದ ದರದಲ್ಲಿ ಒದಗಿಸುವಂತೆ ಹಾಗೂ ಹೆಚ್ಚಿನ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಯಕರ್ನಾಟಕ ಜನಪರ ವೇದಿಕೆಯವರು ಮುಖ್ಯಮಂತ್ರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಸಲ್ಲಿಸಿದರು.

ಬಹುತೇಕ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ, ರಸಗೊಬ್ಬರ ಲಭ್ಯವಿಲ್ಲ ಎಂದು ಹೇಳಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಅಲ್ಲದೆ, ಕೃಷಿ ಚಟುವಟಿಗಳ ಮೇಲೆಯು ದುಷ್ಪರಿಣಾಮ ಬೀರುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ರೈತ ಸಂಪರ್ಕ ಕೇಂದ್ರಗಳ ಮುಂದೆ ಕಡ್ಡಾಯವಾಗಿ ಬೀಜ ಹಾಗೂ ರಸಗೊಬ್ಬರಗಳ ದರ ಪಟ್ಟಿ ಮತ್ತು ಲಭ್ಯವಿರುವ ದಾಸ್ತಾನು ವಿವರವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವಂತೆ ಕ್ರಮ ಕೈಗೊಳ್ಳಬೇಕು. ಹತ್ತಿ ಬೀಜ ಸೇರಿದಂತೆ ಇತರೆ ಎಲ್ಲಾ ಬೀಜಗಳ ಅಧಿಕೃತ ದರಪಟ್ಟಿಯನ್ನು ಪ್ರದರ್ಶಿಸಿ, ಸರ್ಕಾರ ನಿಗದಿಪಡಿಸಿದ ಬೆಲೆಯಲ್ಲಿಯೇ ಮಾರಾಟವಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಸಿಂಗನಳ್ಳಿ, ಜಿಲ್ಲಾ ಕಾರ್ಯಾಧ್ಯಕ್ಷ ಬಾಪುಗೌಡ ಎಸ್.ಪಾಟೀಲ, ರೈತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-26-1921271938

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.