ವಿಜಯಪುರ: ರಸಗೊಬ್ಬರ ಮಾರಾಟದ ವೇಳೆ ನಿಗದಿತ ದರಕ್ಕಿಂತ ಹೆಚ್ಚಿನ ದರ ವಸೂಲಿ, ಅಕ್ರಮ ದಾಸ್ತಾನು ಹಾಗೂ ಕೃತಕ ಅಭಾವ ಸೃಷ್ಟಿಸಿದರೆ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಎಚ್ಚರಿಕೆ ನೀಡಿದರು.

ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ನಡೆದ ಜಿಲ್ಲಾಮಟ್ಟದ ರಸಗೊಬ್ಬರ ಉತ್ಪಾದಕರು ಹಾಗೂ ಮಾರಾಟಗಾರರ ಸಭೆಯಲ್ಲಿ ಅವರು ಮಾತನಾಡಿದರು.

ಎಲ್ಲ ರಸಗೊಬ್ಬರಗಳನ್ನು ಪಿಒಎಸ್ (ಪಾಯಿಂಟ್ ಆಫ್ ಸೇಲ್) ಯಂತ್ರದ ಮೂಲಕವೇ ಕಡ್ಡಾಯವಾಗಿ ಮಾರಾಟ ಮಾಡಿ ದಾಖಲಿಸಬೇಕು ಎಂದರು.

ಯೂರಿಯಾ ರಸಗೊಬ್ಬರ ಮಾರಾಟ ಮಾಡುವಾಗ ಕೃಷಿ ಇಲಾಖೆಯ ಕೆ-ಕಿಸಾನ್ ತಂತ್ರಾಂಶದ ಮೂಲಕ ಫ್ರುಟ್ಸ್ ಐಡಿ ಆಧಾರಿತ ಜಮೀನಿನ ವಿಸ್ತೀರ್ಣದ ಪ್ರಕಾರ, ಒಂದು ಎಕರೆಗೆ ಒಂದು ಚೀಲದಂತೆ ಮಾರಾಟ ಮಾಡಬೇಕು ಎಂದರು.

ರಸಗೊಬ್ಬರ ಮಳಿಗೆಗಳಲ್ಲಿ ಪಿಒಎಸ್ ದಾಖಲಾತಿ ಮತ್ತು ಭೌತಿಕ ದಾಸ್ತಾನು ಹೊಂದಾಣಿಕೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.

ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ಮುಂಬರುವ ಮುಂಗಾರು ಹಂಗಾಮಿಗೆ ಜಿಲ್ಲೆಗೆ ಏಪ್ರಿಲ್ 2026 ದಿಂದ ಸೆಪ್ಟೆಂಬರ್ 2026 ರವರೆಗೆ ಒಟ್ಟು 1.27 ಲಕ್ಷ ಮೆಟ್ರಿಕ್ ಟನ್ ವಿವಿಧ ರಸಗೊಬ್ಬರಗಳ ಬೇಡಿಕೆ ಇದ್ದು, ಸದ್ಯ ಜಿಲ್ಲೆಯಲ್ಲಿ ಒಟ್ಟು 64,337 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಲಭ್ಯವಿದೆ ಎಂದರು.

16,442 ಮೆಟ್ರಿಕ್ ಟನ್ ಯೂರಿಯಾ, 9,871 ಮೆಟ್ರಿಕ್ ಟನ್ ಡಿ.ಎ.ಪಿ ಹಾಗೂ 32,466 ಮೆಟ್ರಿಕ್ ಟನ್ ಕಾಂಪ್ಲೆಕ್ಸ್ ರಸಗೊಬ್ಬರಗಳ ದಾಸ್ತಾನು ಇದೆ. ತಿಂಗಳವಾರು ಸರಬರಾಜು ಪ್ರಕಾರ ಜಿಲ್ಲೆಗೆ ರಸಗೊಬ್ಬರ ಪೂರೈಕೆ ಆಗುತ್ತಿದ್ದು, ಸಮರ್ಪಕ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಸಗೊಬ್ಬರ ಮಾರಾಟಗಾರರಿಗೆ ಸೂಚಿಸಿದರು.

ಜಿಲ್ಲೆಯು ಅಂತರರಾಜ್ಯ ಗಡಿಭಾಗದಲ್ಲಿರುವುದರಿಂದ ಗಡಿಭಾಗಗಳಲ್ಲಿ ಚೆಕ್ ಪೋಸ್ಟ್ ಗಳ ಮೂಲಕ ಯೂರಿಯಾ ಅನಧಿಕೃತ ಸಾಗಾಣಿಕೆಗೆ ನಿಗಾ ವಹಿಸಲಾಗುತ್ತಿದೆ. ಪ್ರತಿವಾರ ವಿಡಿಯೋ ಕಾನ್ಸರೆನ್ಸ್ ಸಭೆಗಳ ಮೂಲಕ ರಸಗೊಬ್ಬರ ಪೂರೈಕೆ, ಮಾರಾಟ ಹಾಗೂ ದಾಸ್ತಾನು ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದರು.

ಯೂರಿಯಾ ಹಾಗೂ ಡಿ.ಎ.ಪಿ ರಸಗೊಬ್ಬರಗಳಿಗೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿ.ಎ.ಪಿ ಬಳಕೆಗೆ ಉತ್ತೇಜನ ನೀಡುವಂತೆ ಮಾರಾಟಗಾರರಿಗೆ ಸೂಚನೆ ನೀಡಲಾಗಿದೆ ಎಂದರು.

ಏಪ್ರಿಲ್ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ಮತ್ತು ಡಿ.ಎ.ಪಿ ಮಾರಾಟ ಮಾಡಿದ ಕೆಲ ರಸಗೊಬ್ಬರ ಮಾರಾಟಗಾರರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಜಂಟಿ ನಿರ್ದೇಶಕರು ಸಭೆಗೆ ವಿವರಿಸಿದರು.

ಸಭೆಯಲ್ಲಿ ರಸಗೊಬ್ಬರ ಉತ್ಪಾದಕ ಕಂಪನಿಗಳ ಪ್ರತಿನಿಧಿಗಳು, ಸಗಟು ಹಾಗೂ ಚಿಲ್ಲರೆ ರಸಗೊಬ್ಬರ ಮಾರಾಟಗಾರರು, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ವಿಭಾಗೀಯ ಉಪ ಕೃಷಿ ನಿರ್ದೇಶಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-26-639823083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.