ವಿಜಯಪುರ: ಫಿಟ್ ಇಂಡಿಯಾ ಆಂದೋಲನದಡಿ ಸೈಕಲ್ ಚಾಲನೆ ಅಭಿಯಾನ (ಸಂಡೇಸ್ ಆನ್ ಸೈಕಲ್-ಸ್ವಚ್ಛತಾ ರೈಡ್) ಗೆ ಭಾನುವಾರ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಚಾಲನೆ ನೀಡಲಾಯಿತು.

ಜಿಲ್ಲೆಯಲ್ಲಿನ ಸ್ವಚ್ಛಾಗ್ರಹಿಗಳು, ನೈರ್ಮಲ್ಯ ಕಾರ್ಮಿಕರು, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯ ಸಿಬ್ಬಂದಿ ಮತ್ತು ಸಾರ್ವಜನಿಕರು ಸಭಾಗಿತ್ವದಲ್ಲಿ ಈ ಅಭಿಯಾನ ನಡೆಯಿತು.

ಕೇಂದ್ರ ಸರ್ಕಾರದ ಕ್ರೀಡಾ ಸಚಿವಾಲಯದ ಅಡಿಯಲ್ಲಿನ ಫಿಟ್ ಇಂಡಿಯಾ ಮಿಷನ್ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಸಹಯೋಗದೊಂದಿಗೆ ದೇಶದಾದ್ಯಂತ ಭಾನುವಾರ ಸೈಕಲ್ ಅಭಿಯಾನದ ವಿಶೇಷ ಆವೃತ್ತಿ ಜರುಗಿತು.

ಈ ಬಾರಿಯ ಅಭಿಯಾನವು ‘ಸ್ವಚ್ಛತಾ ರೈಡ್’ ಎಂಬ ಶೀರ್ಷಿಕೆಯಡಿ ನಡೆಯಿತು. ಕೇಂದ್ರ ಜಲ ಶಕ್ತಿ ಸಚಿವಾಲಯದ ನಿರ್ದೇಶನದಡಿ, ವಿವಿಧ ರೀತಿಯ ಸ್ವಚ್ಛತಾ ಕಾರ್ಯಕ್ರಮಗಳನ್ನು ಜಿಲ್ಲಾಮಟ್ಟದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಹಿನ್ನೆಲೆಯಲ್ಲಿ ವಿಜಯಪುರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರು, ಅಧಿಕಾರಿಗಳು, ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯ ಜಿಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-26-128567880

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.