ವಿಜಯಪುರ: ಮುಂಗಾರು ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಭವನೀಯ ಪ್ರಕೃತಿ ವಿಕೋಪ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮುಂಗಾರು ಮಳೆ ಅವಧಿಯ ಪೂರ್ವಸಿದ್ಧತೆ ಕುರಿತ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.

‘ಮಳೆಗಾಲದಲ್ಲಿ ಪ್ರಕೃತಿ ವಿಕೋಪ, ಪ್ರವಾಹದಲ್ಲಿ ಜನ-ಜಾನುವಾರ ಹಾನಿಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಅಧಿಕಾರಿಯ ಮೊದಲ ಆದ್ಯತೆಯಾಗಬೇಕು’ ಎಂದರು.

ಸಹಾಯವಾಣಿ ಸ್ಥಾಪಿಸಿ: ‘ಎಲ್ಲ ತಾಲ್ಲೂಕಿನಲ್ಲಿ ದಿನದ 24 ಗಂಟೆ ಕಾರ್ಯನಿರ್ವಹಿಸುವ ಸಹಾಯವಾಣಿ ಸ್ಥಾಪಿಸಬೇಕು. ಯಾವುದೇ ಘಟನೆ ಸಂಭವಿಸಿದ ತಕ್ಷಣ ಸ್ಪಂದಿಸಿ, ಸ್ಥಳಕ್ಕೆ ಧಾವಿಸಬೇಕು. ನಿಯಂತ್ರಣ ಕೊಠಡಿ ವ್ಯವಸ್ಥಿತವಾಗಿ ನಿರ್ವಹಿಸಬೇಕು’ ಎಂದರು.

ಪ್ರವಾಹ ಪರಿಸ್ಥಿತಿ– ಇರಲಿ ಸಿದ್ಧತೆ: ‘ಮಳೆಗಾಲದಲ್ಲಿ ಕೃಷ್ಣಾ, ಭೀಮಾ ಮತ್ತು ಡೋಣಿ ನದಿಗಳಲ್ಲಿ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಸನ್ನದ್ಧರಾಗಬೇಕು, ನದಿ ಪಾತ್ರದಲ್ಲಿ ನಿರಂತರ ನಿಗಾ ಮತ್ತು ಪ್ರವಾಹ ಮುನ್ನೆಚ್ಚರಿಕೆ ವಹಿಸಬೇಕು. ಜಲಾಶಯಗಳಲ್ಲಿನ ನೀರಿನ ಲಭ್ಯತೆಯ ಮಾಹಿತಿಯನ್ನು ಪ್ರತಿದಿನ ಸಂಗ್ರಹಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ರಕ್ಷಣಾ ಸಾಮಗ್ರಿ ಬೋಟ್, ಹಗ್ಗ, ಲೈಫ್ ಜಾಕೆಟ್ ಇತ್ಯಾದಿ ಸಾಮಗ್ರಿಗಳನ್ನು ಸುಸಜ್ಜಿತವಾಗಿಟ್ಟುಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ರಾಜ ಕಾಲುವೆಗಳಲ್ಲಿನ ಹೂಳನ್ನು ಸಂಪೂರ್ಣವಾಗಿ ತೆಗೆದು, ಅಲ್ಲಿ ನೀರು ಸರಳವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಸ್ಥಳೀಯ ಆಡಳಿತ ಹಾಗೂ ಪಾಲಿಕೆ ಅಧಿಕಾರಿಗಳು ಒಂದು ವಾರದಲ್ಲಿ ಈ ಕಾರ್ಯ ಪೂರ್ಣಗೊಳಿಸಬೇಕು’ ಎಂದು ಹೇಳಿದರು.

‘ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಫಾಗಿಂಗ್ ಮಾಡಿಸಬೇಕು. ಕ್ಲೋರಿನೇಶನ್ ಮಾಡಬೇಕು. ಕುಡಿಯುವ ನೀರಿನ ಬಗ್ಗೆ ಸದಾ ಎಚ್ಚರವಿರಬೇಕು’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವಾನಂದ ಪಾಟೀಲ, ತೋಟಗಾರಿಕಾ ಜಂಟಿ ನಿರ್ದೇಶಕ ರಾಹುಲ್ ಬಾವಿದೊಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಣಧಿಕಾರಿ ಡಾ.ಸಂಪತ್ ಗುಣಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ. ಚವ್ಹಾಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-26-1064171935

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.