ವಿಜಯಪುರ: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ, ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಹಾಗೂ ಹಾಪ್ಕಾಮ್ಸ್ ಸಹಯೋಗದಲ್ಲಿ ಜನವರಿ 13 ರಿಂದ 15ರ ವರೆಗೆ ನಗರದ ತೋಟಗಾರಿಕೆಯ ಜಂಟಿ ನಿರ್ದೇಶಕರ ಕಚೇರಿಯ ಬಸವ ವನ ಅವರಣದಲ್ಲಿ ಫಲ-ಪುಷ್ಪ ಪ್ರದರ್ಶನ-ಹಣ್ಣುಗಳ ಮೇಳ ಹಾಗೂ ತೋಟಗಾರಿಕೆ ಅಭಿಯಾನ ಏರ್ಪಡಿಲಾಗಿದೆ.

ಮೇಳದಲ್ಲಿ ರೈತರು ಬೆಳೆದಿರುವ ವಿವಿಧ ಹಾಗೂ ಅತ್ಯುತ್ತಮ ತೋಟಗಾರಿಕೆ ಬೆಳೆಗಳ ಪ್ರದರ್ಶನ, ಇಲಾಖಾ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ, ಹಣ್ಣು,ಹೂ, ತರಕಾರಿಗಳಲ್ಲಿ ವಿವಿಧ ಕಲಾಕೃತಿಗಳ ಪ್ರದರ್ಶನ, ತೋಟಗಾರಿಕೆಯಲ್ಲಿ ಯಾಂತ್ರೀಕರಣ, ಯಂತ್ರೋಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ, ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ ಮತ್ತು ಲಿಂಬೆ ಕುರಿತ ವಿಚಾರ ಸಂಕೀರ್ಣ ಹಾಗೂ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ರೈತರು, ಸಾರ್ವಜನಿಕರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳುವಂತೆ ತೋಟಗಾರಿಕೆ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.