ವಿಜಯಪುರ: ರಿಯಲ್ ಎಸ್ಟೇಟ್ ಉದ್ಯಮಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಲಿಸುತ್ತಿದ್ದ ಜೀಪಿಗೆ ಟಿಪ್ಪರ್ ಡಿಕ್ಕಿ ಹೊಡೆಸಿ, ಬಳಿಕ ಗುಂಡು ಹೊಡೆದು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ ಘಟನೆ ನಗರ ಹೊರ ವಲಯದ ಅಲಿಯಾಬಾದ್ನಲ್ಲಿ ಮಂಗಳವಾರ ನಡೆದಿದೆ.

ಅಲಿಯಬಾದ್ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಗೊಡಂದಡ್ಡಿ ಗ್ರಾಮದ ನಿವಾಸಿ ರಾಜು ಬಾಪು ಖರೆ (48) ದುಷ್ಕರ್ಮಿಗಳಿಂದ ಹತ್ಯೆಯಾದವರು ಎಂದು ಪೊಲೀಸರು ಗುರುತಿಸಿದ್ದಾರೆ. ಕೊಲೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಘಟನೆ ವಿವರ:

ರಾಜು ಖರೆ ಅವರು ತಮ್ಮ ಥಾರ್ ಜೀಪಿನಲ್ಲಿ ತೆರಳುತ್ತಿರುವಾಗ ದುಷ್ಕರ್ಮಿಗಳು ಟಿಪ್ಪರ್ ಮೂಲಕ ಮುಖಾಮುಖಿ ಡಿಕ್ಕಿ ಹೊಡೆಸಿದ್ದಾರೆ. ಬಳಿಕ ಕಲ್ಲಿನಿಂದ ಜಜ್ಜಿ ಜೀಪಿನ ಡೋರ್ ಒಡೆದು ಆ ನಂತರ ನಾಲ್ಕೈದು ಬಾರಿ ಗುಂಡು ಹಾರಿಸಿ ಕೊಲೆಗೈದಿದ್ದಾರೆ ಎಂದು ಅವರು ಹೇಳಿದರು.

ರಾಜು ಖರೆ ರಿಯಲ್ ಎಸ್ಟೇಟ್ ದಂದೆ ಮಾಡುತ್ತಿದ್ದರು. ಜೊತೆಗೆ ದ್ರಾಕ್ಷಿ ಕೃಷಿಕರಾಗಿದ್ದರು. ಕೌಟುಂಬಿಕ ಆಸ್ತಿ ವಿವಾದ ಇತ್ತು ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದರ ಕುರಿತು ತನಿಖೆಯಿಂದ ತಿಳಿಯಬೇಕಾಗಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿಸಿದರು.

ಕೊಲೆಯಾದ ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಮತ್ತು ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.