ವಿಜಯಪುರ: ‘ಜಿಲ್ಲೆಯಲ್ಲಿ ತೈಲ ಪೂರೈಕೆ ವಿಷಯದಲ್ಲಿ ಕಂಪನಿಗಳು ಜಾಗರೂಕತೆ ವಹಿಸಿ, ಸಮಸ್ಯೆ ಬಾರದ ರೀತಿಯಲ್ಲಿ ಇಂಧನ ಪೂರೈಸಬೇಕು’ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಎಲ್ಲ ತೈಲ ಕಂಪನಿಯ ಅಧಿಕಾರಿಗಳು ಹಾಗೂ ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಗೆ ವಿವಿಧ ತೈಲ ಕಂಪನಿ ವಿತರಕರು ಸಮರ್ಪಕವಾಗಿ ಪೆಟ್ರೋಲ್ ಮತ್ತು ಡಿಸೈಲ್ ಪೂರೈಸಬೇಕು. ಎಲ್ಲ ಬಂಕ್ ಮಾಲೀಕರು ದೈನಂದಿನ ಮಾಹಿತಿ ಒದಗಿಸಬೇಕು, ಸಾರ್ವಜನಿಕರ ಬೇಡಿಕೆ ಅನುಸಾರ ಇಂಧನ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಮಾರಾಟಗಾರರಿಗೆ ಸೂಚಿಸಿದರು.

‘ಮುಂಗಾರು ಆರಂಭವಾಗಿದೆ. ಏಳೂವರೆ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೈತರ ಉಳುಮೆ ಕಾರ್ಯ ನಡೆಯುತ್ತಿದೆ. ಹಾಗಾಗಿ ರೈತರಿಗೆ ಯಾವುದೇ ಅನಾನುಕೂಲ ಹಾಗೂ ಸಮಸ್ಯೆಯಾಗದಂತೆ ಇಂಧನ ಪೂರೈಕೆ ಮಾಡಬೇಕು. ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ನಿಗಾವಹಿಸಬೇಕು’ ಎಂದರು.

ಗ್ರಾಹಕರ ಹಿತರಕ್ಷಣೆ, ಇಂಧನ ಸುರಕ್ಷತೆ ಮತ್ತು ನಿಯಮಾವಳಿಗಳ ಪಾಲನೆ ಕುರಿತು ಚರ್ಚೆ ನಡೆಸಲಾಯಿತು.

ತೈಲ ಕಂಪನಿ ಪ್ರತಿನಿಧಿಗಳು ಮಾತನಾಡಿ, ಜಿಲ್ಲೆಯಲ್ಲಿ ಇಂಧನದ ಕೊರತೆ ಇರುವುದಿಲ್ಲ ಎಂದು ಸ್ಪಷ್ಟಪಡಿಸುವುದರ ಜೊತೆಗೆ ಇಂಡೆಂಟ್ ಅನುಗುಣವಾಗಿ ಇಂಧನ ಪೂರೈಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಮಾತನಾಡಿ, ‘ಜಿಲ್ಲೆಯಲ್ಲಿ ಸರ್ಕಾರಿ ಸ್ವಾಮ್ಯದ ಬಿಪಿಸಿಎಲ್ 71, ಐಒಸಿಎಲ್ 135, ಎಚ್ಪಿಸಿಎಲ್ 74 ಇದ್ದು, ಜಿಯೋಬಿಪಿ 12, ಎಂಆರ್ಪಿಎಲ್ 2 ಹಾಗೂ ನಯಾರ 18 ಒಳಗೊಂಡಂತೆ ಒಟ್ಟು 312 ಪೆಟ್ರೋಲ್ ಬಂಕ್ಗಳು ಕಾರ್ಯ ನಿರ್ವಹಿಸುತ್ತಿವೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ತಾಂಡೂರ, ಜಿಲ್ಲೆಯ ಎಲ್ಲಾ ತೈಲ ಕಂಪನಿಗಳ ಮಾರಾಟ ಅಧಿಕಾರಿಗಳು ಹಾಗೂ ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-26-1595927805

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.