ವಿಜಯಪುರ: ಖಾಸಗಿ ಸಹಭಾಗಿತ್ವದಲ್ಲಿ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವುದನ್ನು ವಿರೋಧಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಅವರನ್ನು ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ನಿಯೋಗ ಕಲಬುರ್ಗಿಯಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.

ಪಿಪಿಪಿ ಮಾದರಿಗೆ ಜಿಲ್ಲೆಯ ಜನರ ತೀವ್ರ ವಿರೋಧವಿದ್ದು, ಯಾವುದೇ ಕಾರಣಕ್ಕೂ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಬಾರದು ಎಂದು ಹೋರಾಟ ಸಮಿತಿಯ ನಿಯೋಗವು ಸಚಿವರನ್ನು ಆಗ್ರಹಿಸಿತು.

ಸಕಾರಾತ್ಕವಾಗಿ ಸ್ಪಂದಿಸಿದ ಸಚಿವರು, ’ಈ ಸಂಬಂಧ ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಸರ್ಕಾರಿ ಕಾಲೇಜು ಆರಂಭಕ್ಕೆ ಮನವಿ ಮಾಡಲಾಗುವುದು’ ಎಂದರು.

ನಿಯೋಗದಲ್ಲಿ ಹೋರಾಟ ಸಮಿತಿಯ ಮುಖಂಡರಾದ ಬಿ.ಭಗವಾನ್ ರೆಡ್ಡಿ, ಅಕ್ರಮ ಮಾಶಾಳಕರ, ಅರವಿಂದ ಕುಲಕರ್ಣಿ, ಎಚ್. ಟಿ. ಭರತಕುಮಾರ, ಅಲ್ಲಮ ಪ್ರಭು, ರೇಣುಕಾ, ಗುರುರಾಜ ದೇಶಪಾಂಡೆ ಇದ್ದರು.

ಡಿ.ಸಿಗೆ ಎಎಪಿ ಮನವಿ: ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿ ಅಡಿಯಲ್ಲಿ ವಿಜಯಪುರದಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ (ಎಎಪಿ)ದ ವಿಜಯಪುರ ಜಿಲ್ಲಾ ಘಟಕ ವಿರೋಧಿಸಿ ಜಿಲ್ಲಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿತು.

ಎಎಪಿ ಜಿಲ್ಲಾ ಘಟಕದ ಅಧ್ಯಕ್ಷ ಭೋಗೇಶ್ ಸೋಲಾಪುರ, ‘ಪಿಪಿಪಿ ಮಾದರಿಯು ವೈದ್ಯಕೀಯ ಶಿಕ್ಷಣವನ್ನು ಲಾಭದಾಯಕ ಉದ್ಯಮವಾಗಿ ಪರಿವರ್ತಿಸುವ ಅಪಾಯ ಇದೆ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಕೈಗೆಟುಕುವಂತಿಲ್ಲ‘ ಎಂದರು.

’ಈಗಾಗಲೇ ಮಾಡಿರುವ ಪಿಪಿಪಿ ವೈದ್ಯಕೀಯ ಕಾಲೇಜುಗಳು ವಿಫಲವಾಗಿವೆ. ಪಿಪಿಪಿ ಮಾದರಿಯನ್ನು ರದ್ದುಗೊಳಿಸಿ ಸಂಪೂರ್ಣವಾಗಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಬೇಕು‘ ಎಂದು ಆಗ್ರಹಿಸಿದರು.

ಎಎಪಿ ಮುಖಂಡರಾದ ಸಂಜು ಶೆಟಗಾರ, ಅವನಾಶ ಐಹೊಳೆ, ದಾದು ಪಟೇಲ್, ಅಮೀರ್ ಸೊಹೈಲ್ ಪಟೇಲ್, ಎ.ಎ. ಗಚ್ಚಿನಮಹಲ್, ಅಶೋಕ್ ಪಾಟೀಲ್, ಯಾಸಿನ್ ಗೋಗಿ ಮತ್ತಿರರು ಇದ್ದರು.

ಕಲಬುರ್ಗಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ | ಮುಖ್ಯಮಂತ್ರಿ ಗಮನಕ್ಕೆ ತರುವುದಾಗಿ ಸಚಿವ ಭರವಸೆ | ಎಎಪಿಯಿಂದ ಜಿಲ್ಲಾಧಿಕಾರಿಗೆ ಮನವಿ

ಹೋರಾಟ ಸಮಿತಿ ಸಭೆ ನಾಳೆ

ವಿಜಯಪುರ: ವಿಜಯಪುರ ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿಯಿಂದ ಸೆ.3 ರಂದು ಬೆಳಿಗ್ಗೆ 11ಕ್ಕೆ ಡಾ.ಬಿ.ಆರ್ ಅಂಬೇಡ್ಕರ್ ಸಭಾಭವನದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಹೋರಾಟ ತೀವ್ರಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆ ಮತ್ತು ಸಂಘಟನೆಗಳ ಸರ್ವ ಸದಸ್ಯರ ಸಭೆಯನ್ನು ಕರೆಯಲಾಗಿದೆ. ಜಿಲ್ಲೆಯ ಜನತೆ ಒಂದಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಒತ್ತಾಯಿಸಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಸಚಿವರು ಮುಖ್ಯಮಂತ್ರಿಗಳ ಮೇಲೂ ಒತ್ತಡ ತರಬೇಕಿದೆ. ಆ ನಿಟ್ಟಿನಲ್ಲಿ ಪಕ್ಷಾತೀತ ಜಾತ್ಯತೀತ ಪಾರದರ್ಶಕವಾಗಿ ಹೋರಾಟವನ್ನು ಸಂಘಟಿಸಲು ಸಭೆ ಆಯೋಜಿಸಲಾಗಿದೆ ಎಂದು ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ತಿಳಿಸಿದೆ. ಹೋರಾಟದಲ್ಲಿ ಪಾಲ್ಗೊಳ್ಳುವವರು ಮೊ9538628531 9980096209 9740420826ಗೆ ಸಂಪರ್ಕಿಸುವಂತೆ ಹೋರಾಟ ಸಮಿತಿಯ ಪರವಾಗಿ ಎಚ್.ಟಿ. ಭರತಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.