ವಿಜಯಪುರ: ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚದಿರುವಂತೆ ಆಗ್ರಹಿಸಿ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳ ಕಾವು ಜೋರಾಗಿದೆ.

ಸರ್ಕಾರಿ ಶಾಲೆ ಉಳಿಸುವ ನಿಟ್ಟಿನಲ್ಲಿ ಎಐಡಿಎಸ್ಒ ಜಿಲ್ಲಾ ಘಟಕ ಕರೆ ನೀಡಿರುವ ಪ್ರತಿಭಟನೆಗೆ ಅನೇಕ ಗ್ರಾಮಗಳಲ್ಲಿ ವ್ಯಾಪಕ ಸ್ಪಂದನೆ ವ್ಯಕ್ತವಾಗಿ ಗ್ರಾಮಸ್ಥರೇ ಹೋರಾಟಕ್ಕೆ ಸಾಥ್ ನೀಡುತ್ತಿದ್ದಾರೆ. ಸರ್ಕಾರಿ ಶಾಲೆ ಮುಚ್ಚಬೇಡಿ, ಹೊಸ ಯೋಜನೆಗಳ ಮುಖವಾಡದ ಮೂಲಕ ಶಾಲೆ ಮುಚ್ಚುವ ಹುನ್ನಾರ ಮಾಡಬೇಡಿ ಎಂಬ ಘೋಷಣೆಗಳನ್ನು ಕೂಗಿ ಸರ್ಕಾರಕ್ಕೆ ಸಂದೇಶ ರವಾನಿಸಿದ್ದಾರೆ.

ಅಂಕಲಗಿ ಗ್ರಾಮದ ಇಂಡಿ ವಸ್ತಿ, ಅರಕೇರಿ ಗ್ರಾಮದ ಮಾನೆ ವಸ್ತಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಹೋರಾಟ ತೀವ್ರವಾಗಿದ್ದು, ಯಾವ ಕಾರಣಕ್ಕೂ ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಗುಡುಗಿದ್ದಾರೆ.

ಅಂಕಲಗಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಗೋವಿಂದ ಯಳವಾರ ಮಾತನಾಡಿ, ‘ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ಸರ್ಕಾರ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಯತ್ನ ಮಾಡುತ್ತಿದೆ’ ಎಂದು ಆರೋಪಿಸಿದರು. ಸರ್ಕಾರ ನಿಜವಾಗಿಯೂ ಶಿಕ್ಷಣದ ಬಗ್ಗೆ ಕಾಳಜಿ ಹೊಂದಿದ್ದರೆ, ಶಾಲೆಗಳನ್ನು ವಿಲೀನಗೊಳಿಸುವುದಿಲ್ಲ ಎಂದು ಲಿಖಿತ ಆದೇಶ ಹೊರಡಿಸಬೇಕು’ ಎಂದು ಆಗ್ರಹಿಸಿದರು.

ಶಿಕ್ಷಣ ಉಳಿಸಿ ಸಮಿತಿ ಸದಸ್ಯರಾದ ಸಿದ್ದಲಿಂಗ ಬಾಗೇವಾಡಿ, ಬಾಬು ಇಂಡಿ, ಸಿದ್ದಪ್ಪ ದಿಂಡವಾರ, ಬಿ.ಎನ್. ಇಂಡಿ, ಮಾಳಪ್ಪ ಇಂಡಿ, ಶಿವಪ್ಪ ಇಂಡಿ, ಶ್ರೀಶೈಲ್ ಇಂಡಿ, ಚಂದ್ರ ಪೂಜಾರಿ ಪಾಲ್ಗೊಂಡಿದ್ದರು.

ಅರಕೇರಿಯಲ್ಲಿ ನಡೆದ ಧರಣಿಯಲ್ಲಿ ಎಸ್ಡಿಎಂಸಿ ಅಧ್ಯಕ್ಷ ಬಾಲಕೃಷ್ಣ ಭಂಡಾರಿ ಮಾತನಾಡಿ, ಪ್ರಾಥಮಿಕ ಹಂತದ ಮಕ್ಕಳಿಗೆ ದೂರದ ಶಾಲೆಗಳಿಗೆ ಹೋಗುವುದು ಕಷ್ಟಕರವಾಗುತ್ತದೆ. ಗ್ರಾಮೀಣ ಮಕ್ಕಳ ಶಿಕ್ಷಣಕ್ಕಾಗಿ ಇರುವ ಶಾಲೆಗಳನ್ನು ಉಳಿಸುವುದು ಅಗತ್ಯ ಎಂದರು.

ಎಐಎಂಎಸ್ಎಸ್ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶಿವಬಾಳಮ್ಮ ಕೊಂಡಗೂಳಿ ಮಾತನಾಡಿದರು.

ಪಾಂಡು ಮಾನೆ, ಗೇಮು ಲಮಾಣಿ, ರಾಜು ಬಂಡಾರಿ, ಶ್ರೀಕಾಂತ ಮಾನೆ, ಮಾರುತಿ ಬಂಡಾರಿ, ಪರಸುರಾಮ ಮಾನೆ, ಮದು ಬಂಡಾರಿ, ಸುರೇಶ ಲಮಾಣಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-26-628735541

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.