ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

250 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಮೊದಲ ಹಂತದ 111 ಗ್ರಾಮ ಪಂಚಾಯ್ತಿ ಚುನಾವಣಾ ಕಣದಲ್ಲಿ 4,997 ಆಕಾಂಕ್ಷಿಗಳು
Last Updated 15 ಡಿಸೆಂಬರ್ 2020, 11:16 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯ ವಿಜಯಪುರ, ಬಬಲೇಶ್ವರ, ತಿಕೋಟಾ, ಬಸವನ ಬಾಗೇವಾಡಿ, ನಿಡಗುಂದಿ, ಕೊಲ್ಹಾರ, ಮುದ್ದೇಬಿಹಾಳ, ತಾಳಿಕೋಟೆ ತಾಲ್ಲೂಕಿನ 111 ಗ್ರಾಮ ಪಂಚಾಯ್ತಿಗಳ 2126 ಸ್ಥಾನಗಳಿಗೆ ಡಿ.22ರಂದು ನಡೆಯಲಿರುವ ಮೊದಲ ಹಂತದ ಚುನಾವಣಾ ಕಣದಲ್ಲಿ ಅಂತಿಮವಾಗಿ 4,997 ಅಭ್ಯರ್ಥಿಗಳು ಇದ್ದಾರೆ.

1984 ಆಕಾಂಕ್ಷಿಗಳು ನಾಮಪತ್ರ ಹಿಂಪಡೆದಿದ್ದು,250 ಜನ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್‌‌ ಘೋಷಿಸಿದ್ದಾರೆ.

ಪರಿಶಿಷ್ಟ ಜಾತಿಗೆ ಸೇರಿದ 1353, ಪರಿಶಿಷ್ಟ ಪಂಗಡಕ್ಕೆ ಸೇರಿದ 188, ಹಿಂದುಳಿದ ವರ್ಗ ‘ಎ’ 772, ಹಿಂದುಳಿದ ವರ್ಗ ‘ಬಿ’ 166 ಹಾಗೂ 2518 ಸಾಮಾನ್ಯ ಅಭ್ಯರ್ಥಿಗಳು ಚುನಾವಣೆಯ ಅಂತಿಮ ಕಣದಲ್ಲಿದ್ದಾರೆ.

2645 ಪುರುಷರು ಹಾಗೂ 2352 ಮಹಿಳೆಯರು ಈ ಬಾರಿಯ ಗ್ರಾಮ ಪಂಚಾಯ್ತಿಯ ಚುನಾವಣಾ ಕಣದಲ್ಲಿ ಇದ್ದಾರೆ.

ಬಬಲೇಶ್ವರ ತಾಲ್ಲೂಕಿನ ಒಂದು ಗ್ರಾಮ ಪಂಚಾಯ್ತಿ ಸ್ಥಾನಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ವಿಜಯಪುರ:

ವಿಜಯಪುರ ತಾಲ್ಲೂಕಿನ 17 ಗ್ರಾಮ ಪಂಚಾಯ್ತಿಗಳ 355 ಸ್ಥಾನಗಳಲ್ಲಿ 12 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 343 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 299 ಜನ ನಾಮಪತ್ರವನ್ನು ಹಿಂಪಡೆದಿದ್ದಾರೆ.

ಬಬಲೇಶ್ವರ:

ಬಬಲೇಶ್ವರತಾಲ್ಲೂಕಿನ 15 ಗ್ರಾಮ ಪಂಚಾಯ್ತಿಗಳ 299 ಸ್ಥಾನಗಳಲ್ಲಿ 33 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 265 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 318 ಜನ ನಾಮಪತ್ರವನ್ನು ಹಿಂಪಡೆದಿದ್ದಾರೆ.

ತಿಕೋಟಾ:

ತಿಕೋಟಾ ತಾಲ್ಲೂಕಿನ 14 ಗ್ರಾಮ ಪಂಚಾಯ್ತಿಗಳ 287 ಸ್ಥಾನಗಳಲ್ಲಿ 44 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 243 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 260 ಜನ ನಾಮಪತ್ರವನ್ನು ಹಿಂಪಡೆದಿದ್ದಾರೆ.

ಬಸವನ ಬಾಗೇವಾಡಿ:

ಬಸವನ ಬಾಗೇವಾಡಿತಾಲ್ಲೂಕಿನ 15 ಗ್ರಾಮ ಪಂಚಾಯ್ತಿಗಳ 313 ಸ್ಥಾನಗಳಲ್ಲಿ 56 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 257 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 281 ಜನ ನಾಮಪತ್ರವನ್ನು ಹಿಂಪಡೆದಿದ್ದಾರೆ.

ನಿಡಗುಂದಿ:

ನಿಡಗುಂದಿ ತಾಲ್ಲೂಕಿನ 8 ಗ್ರಾಮ ಪಂಚಾಯ್ತಿಗಳ 144 ಸ್ಥಾನಗಳಲ್ಲಿ 17 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 127 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 101 ಜನ ನಾಮಪತ್ರವನ್ನು ಹಿಂಪಡೆದಿದ್ದಾರೆ.

ಕೊಲ್ಹಾರ:

ಕೊಲ್ಹಾರ ತಾಲ್ಲೂಕಿನ 8 ಗ್ರಾಮ ಪಂಚಾಯ್ತಿಗಳ 144 ಸ್ಥಾನಗಳಲ್ಲಿ 14 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 130 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 87 ಜನ ನಾಮಪತ್ರವನ್ನು ಹಿಂಪಡೆದಿದ್ದಾರೆ.

ಮುದ್ದೇಬಿಹಾಳ:

ಮುದ್ದೇಬಿಹಾಳತಾಲ್ಲೂಕಿನ 20 ಗ್ರಾಮ ಪಂಚಾಯ್ತಿಗಳ 326 ಸ್ಥಾನಗಳಲ್ಲಿ 45 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 281 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 326 ಜನ ನಾಮಪತ್ರವನ್ನು ಹಿಂಪಡೆದಿದ್ದಾರೆ.

ತಾಳಿಕೋಟೆ:

ತಾಳಿಕೋಟೆ ತಾಲ್ಲೂಕಿನ 14 ಗ್ರಾಮ ಪಂಚಾಯ್ತಿಗಳ 258 ಸ್ಥಾನಗಳಲ್ಲಿ 29 ಜನ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 229 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 312 ಜನ ನಾಮಪತ್ರವನ್ನು ಹಿಂಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT