ವಿಜಯಪುರ: ಗ್ರಾಮ ಪಂಚಾಯಿತಿಗಳಲ್ಲಿ ನಡೆಯುತ್ತಿರುವ ತೆರಿಗೆ ಸಂಗ್ರಹಣೆ ಶೇ 100ರಷ್ಟು ಸಾಧಿಸಬೇಕು. ಗುರಿ ಸಾಧನೆಯಲ್ಲಿ ಹಿಂದುಳಿದ ಪಂಚಾಯಿತಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.

ನಗರದ ತಾ.ಪಂ. ಸಭಾಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಕುರಿತು ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಂಥಾಲಯ ಕರ ಹಾಗೂ ಭಿಕ್ಷುಕರ ಕರ ವಸೂಲಾತಿ ಪ್ರಗತಿಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದರು.

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದ ಸಾಮಗ್ರಿ ಹಣ ಪಾವತಿ, ಬಾಕಿ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿ, ಬಾಕಿ ಪಾವತಿಗಳನ್ನು ತ್ವರಿತವಾಗಿ ಪಾವತಿಸಿ ಕಾಮಗಾರಿಗಳ ನಿರಂತರತೆ ಕಾಯ್ದುಕೊಳ್ಳಬೇಕು ಎಂದರು.

ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿಕಾರರ ಇ-ಕೆವೈಸಿ ಪ್ರಕ್ರಿಯೆಯ ಪ್ರಗತಿಯು ನಿರೀಕ್ಷಿತವಾಗಿಲ್ಲ. ಆದ್ದರಿಂದ ಎಲ್ಲ ಕೂಲಿಕಾರರ ಇ-ಕೆವೈಸಿಯನ್ನು ಶೇ 100ರಷ್ಟು ಪೂರ್ಣಗೊಳಿಸಬೇಕು. ಅದೇ ರೀತಿ, ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಕ್ರಮ ಕೈಗೊಳ್ಳಲು ಎಲ್ಲ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಪ್ರಮುಖವಾದ ದ್ರವ ತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ಈ ಯೋಜನೆಗಳ ಅನುಷ್ಠಾನದಲ್ಲಿ ವೇಗ ಹೆಚ್ಚಿಸಿ, ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದರು.

ಗ್ರಾಮ ಮಟ್ಟದಲ್ಲಿ ಜ್ಞಾನ ವಿಸ್ತರಣೆಗೆ ನೆರವಾಗುವ ಗ್ರಂಥಾಲಯಗಳ ಸ್ವಚ್ಛತೆ ಮತ್ತು ನಿರ್ವಹಣೆ ಕುರಿತು ವಿಶೇಷ ಗಮನ ಹರಿಸಿ, ಗ್ರಂಥಾಲಯಗಳನ್ನು ನಿರಂತರವಾಗಿ ಸ್ವಚ್ಛವಾಗಿಡುವುದರ ಜೊತೆಗೆ, ಸಾರ್ವಜನಿಕರ ಬಳಕೆಗೆ ಅನುಕೂಲವಾಗುವಂತೆ ಸುಧಾರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈಗಾಗಲೇ ಬೇಸಿಗೆ ಆರಂಭವಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಎಲ್ಲ ಗ್ರಾಮಗಳಿಗೂ ಸಮರ್ಪಕ ಕುಡಿಯುವ ನೀರಿನ ಪೂರೈಕೆ ಮಾಡಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಾ.ಪಂ.ಸಹಾಯಕ ನಿರ್ದೇಶಕ ಎಸ್.ಆರ್. ಕಟ್ಟಿ, ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-26-1537658223

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.