ವಿಜಯಪುರ: ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಬಬಲೇಶ್ವರ ಮತಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.

ತಿಕೋಟಾ ತಾಲ್ಲೂಕಿನ ಮಲಕನದೇವರಹಟ್ಟಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೋಮದೇವರಹಟ್ಟಿ- ಮಲಕನದೇವರಹಟ್ಟಿ ವರೆಗೆ ಮೂಲಸೌಕರ್ಯ ಅಭಿವೃದ್ಧಿ ಅನುದಾನದಲ್ಲಿ ಜಿಲ್ಲಾ ಮುಖ್ಯ ರಸ್ತೆ ಸುಧಾರಣೆ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಮಲಕನದೇವರಹಟ್ಟಿ ಗ್ರಾಮದ ಎರಡು ಕೆರೆಗಳ ಕಾಮಗಾರಿ ಪೂರ್ಣಗೊಂಡಿದೆ. ಮುಂಬರುವ ದಿನಗಳಲ್ಲಿ ನೀರು ತುಂಬಿಸಲಾಗುವುದು. ಬಾಬಾನಗರ ಬಳಿ ಸುಮಾರು ಒಂದು ಟಿಎಂಸಿ ಸಾಮರ್ಥ್ಯದ ಡ್ಯಾಂ ನಿರ್ಮಿಸಲಾಗುತ್ತಿದ್ದು, ಮೂರ್ನಾಲ್ಕು ತಿಂಗಳಲ್ಲಿ ಡಿಪಿಅರ್ ಮತ್ತು ಟೆಂಡರ್ ಪ್ರಕ್ರಿಯೆ ಮುಗಿಯಲಿದೆ. ಅದರ ನಂತರ ಡ್ಯಾಂ ಕಾಮಗಾರಿ ಪ್ರಾರಂಭವಾಗಿ ನಿಗದಿತ ಸಮಯದಲ್ಲಿ ಪೂರ್ಣವಾಗಲಿದೆ. ಇದರಿಂದ ಬೇಸಿಗೆಯಲ್ಲಿ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದರು.

ಭೂಮಿಪೂಜೆ ನೆರವೇರಿಸಲಾದ ರಸ್ತೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ಸಮುದಾಯ ಭವನಕ್ಕೆ ಅನುದಾನ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟೆ, ವಿದ್ಯಾಧರ ಶರಣಯ್ಯ ಹಿರೇಮಠ, ದಯಾನಂದ ಹಿರೇಮಠ, ಸಿದ್ದು ಗೌಡನವರ, ಜಗದೀಶ ವಳಸಂಗ, ಚನ್ನಪ್ಪ ದಯಗೊಂಡ, ರಮೇಶ ಜಂಬಗಿ, ಮಲ್ಲಪ್ಪ ರಾಮೋಜಿ, ರವಿ ಹಿರೇಮಠ, ನಿಂಗವ್ವ ನಿಡೋಣಿ, ಭೀಮವ್ವ ಜಂಬಗಿ, ನೀರಾವರಿ ನಿಗಮದ ಎಇಇ ಅಂಬಣ್ಣ ಹರಳಯ್ಯ, ಲೋಕೋಪಯೋಗಿ ಇಲಾಖೆ ಎಇಇ ಪ್ರಮೋದ ಹಟ್ಟಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-26-886632862

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.