ವಿಜಯಪುರ: ಜಿಲ್ಲೆಯ ಇಬ್ಬರು ಕುಖ್ಯಾತ ರೌಡಿಗಳನ್ನು ಗೂಂಡಾಕಾಯ್ದೆಯಡಿ ಬಂಧಿಸಿ ರಾಜ್ಯದ ವಿವಿಧ ಜೈಲಿಗೆ ಅಟ್ಟಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

ತಿಕೋಟಾ ತಾಲ್ಲೂಕಿನ ಹಂಚಿನಾಳ ತಾಂಡಾ ನಂ.1ರ ಸುರೇಶ ರಾಠೋಡ (43) ವಿರುದ್ಧ 1 ಕೊಲೆ, 3 ಕೊಲೆ ಪ್ರಯತ್ನ ಹಾಗೂ 10 ಭಾರತೀಯ ಆಯುಧ ಕಾಯ್ದೆ ಅಡಿಯಲ್ಲಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ 6 ಪ್ರಕರಣಗಳು, ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ 4, ತಿಕೋಟಾ ಪೊಲೀಸ್ ಠಾಣೆಯಲ್ಲಿ 1, ಜಲನಗರ ಪೊಲೀಸ್ ಠಾಣೆಯಲ್ಲಿ 1 ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ 1 ಹಾಗೂ ಸಿಂದಗಿ ಪೊಲೀಸ್ ಠಾಣೆಯಲ್ಲಿ 1 ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಅಲ್ಲದೇ, ತನ್ನ ಸಹಚರರೊಂದಿಗೆ ಸೇರಿಕೊಂಡು ಪದೇ ಪದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಾ ಸಮಾಜಕ್ಕೆ ಕಂಟಕಪ್ರಾಯವಾಗಿದ್ದ ಎಂದು ಅವರು ತಿಳಿಸಿದ್ದಾರೆ.

ವಿಜಯಪುರ ನಗರದ ಗಚ್ಚಿನಮಹಲ್ ಹತ್ತಿರದ ಸೈಯದ್ಫಜಲುಲ್ಲಾ ಸೈಫುದ್ದೀನ್ ಇನಾಂದಾರ(31) ಎಂಬಾತ ವಿರುದ್ಧ 2 ಕೊಲೆ, 1 ಕೊಲೆ ಯತ್ನ, 1 ದರೋಡೆಗೆ ಯತ್ನ ಸೇರಿದಂತೆ ಗಾಂಧಿಚೌಕ ಠಾಣೆಯಲ್ಲಿ 1, ಗೋಳಗುಮ್ಮಟ ಠಾಣೆಯಲ್ಲಿ 1, ಜಲನಗರ ಠಾಣೆಯಲ್ಲಿ 1, ಬಬಲೇಶ್ವರ ಠಾಣೆಯಲ್ಲಿ 1 ಸೇರಿದಂತೆ ಒಟ್ಟು 4 ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಅಲ್ಲದೇ, ತನ್ನ ಸಹಚರರೊಂದಿಗೆ ಸೇರಿಕೊಂಡು ಪದೇ ಪದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ, ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಯನ್ನು ಹಾಳುಗೆಡುವುದಲ್ಲದೇ, ಅಮಾಯಕ ಜನರ ಪ್ರಾಣಹಾನಿ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.

ಇವರಿಬ್ಬರೂ ನಿರಂತರವಾಗಿ ತನ್ನ ಸಮಾಜಘಾತಕ ಕೃತ್ಯಗಳನ್ನು ಮುಂದುವರಿಸಿ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದು, ಇವರ ಚಟುವಟಿಕೆಗಳನ್ನು ನಿಯಂತ್ರಿಸಲು ಮತ್ತು ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ಗೂಂಡಾ ಕಾಯ್ದೆಯಡಿಯಲ್ಲಿ ಬಂಧನದಲ್ಲಿಡಲು ಪೊಲೀಸ್ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಿದ್ದರ ಆಧಾರದ ಮೇರೆಗೆ ಜಿಲ್ಲಾಧಿಕಾರಿಗಳು ಬಂಧನ ಆಜ್ಞೆ ಹೊರಡಿಸಿದ್ದರು ಎಂದರು.

ಈ ಇಬ್ಬರು ರೌಡಿಗಳನ್ನು ಜಿಲ್ಲಾಧಿಕಾರಿಗಳ ಬಂಧನ ಆದೇಶದ ಮೇರೆಗೆ ಮಂಗಳೂರು ಮತ್ತು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-26-1321633125

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.