ವಿಜಯಪುರ: ‘ಪ್ರತಿ ರೋಗಿಗೂ ಸಮರ್ಪಕ ಮತ್ತು ಗುಣಮಟ್ಟದ ಚಿಕಿತ್ಸೆಯನ್ನು ಸಕಾಲಕ್ಕೆ ನೀಡಬೇಕು. ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಅವರು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗೆ ಸೂಚಿಸಿದರು.

ಮನಗೂಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರದ ಕಾರ್ಯನಿರ್ವಹಣೆ ಹಾಗೂ ಸೇವೆಗಳ ಗುಣಮಟ್ಟವನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

‘ಔಷಧ ಲಭ್ಯತೆ ಖಚಿತಪಡಿಸಿಕೊಳ್ಳಬೇಕು. ರೋಗಿಗಳಿಗೆ ಹೊರಗೆ ಔಷಧ ಖರೀದಿಸುವಂತೆ ತಿಳಿಸಿ, ತೊಂದರೆ ನೀಡಬಾರದು’ ಎಂದರು.

ತಪಾಸಣಾ ಸೇವೆಗೆ ವೇಗ: ರಕ್ತ ಪರೀಕ್ಷೆ ಸೇರಿದಂತೆ ಎಲ್ಲ ತಪಾಸಣೆಗಳನ್ನು ಶೀಘ್ರ ಮತ್ತು ನಿಖರವಾಗಿ ಪೂರ್ಣಗೊಳಿಸುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

‘ಆರೋಗ್ಯ ಕೇಂದ್ರದ ಒಳ ಹಾಗೂ ಹೊರ ಭಾಗಗಳಲ್ಲಿ ಸ್ವಚ್ಛತೆ ಕಾಪಾಡಿ, ರೋಗಿಗಳಿಗೆ ಆರೋಗ್ಯಕರ ವಾತಾವರಣ ಒದಗಿಸಬೇಕು’ ಎಂದರು.

‘ಒಳರೋಗಿ ಮತ್ತು ಹೊರರೋಗಿಗಳ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಿ, ದಿನನಿತ್ಯದ ಮಾಹಿತಿಯನ್ನು ನವೀಕರಿಸಬೇಕು. ಕುಡಿಯುವ ನೀರು, ವಿದ್ಯುತ್, ಶೌಚಾಲಯ ಸೇರಿದಂತೆ ಎಲ್ಲಾ ಸೌಲಭ್ಯಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು’ ಎಂದರು.

ಪರಿಶೀಲನೆ ವೇಳೆ ಆರೋಗ್ಯ ಕೇಂದ್ರದ ಸ್ವಚ್ಛತೆ ಹಾಗೂ ವ್ಯವಸ್ಥೆಯ ಬಗ್ಗೆ ಸಿಇಒ ಮೆಚ್ಚುಗೆ ವ್ಯಕ್ತಪಡಿಸಿದರು.

ಕೇಂದ್ರದಲ್ಲಿನ ರಕ್ತ ತಪಾಸಣಾ ಘಟಕ, ರಕ್ತ ಪರೀಕ್ಷಾ ಸೌಲಭ್ಯ, ಸಿಬ್ಬಂದಿ ಹಾಜರಾತಿ, ದಾಖಲೆಗಳು, ಆರೋಗ್ಯ ಕೇಂದ್ರದ ಸ್ವಚ್ಛತೆ, ಒಳರೋಗಿ ಹಾಗೂ ಹೊರರೋಗಿಗಳ ವಾರ್ಡ್, ಲೇಬರ್ ವಾರ್ಡ್, ಔಷಧ ವಿತರಣಾ ಕೇಂದ್ರ, ಸಿಸಿಟಿವಿ ವ್ಯವಸ್ಥೆ ಪರಿಶೀಲಿಸಿದರು. ಚಿಕಿತ್ಸೆಗೆ ಆಗಮಿಸಿದ್ದ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಿದರು.

ಚಿಕಿತ್ಸೆಯ ಸಮಯಪಾಲನೆ, ಔಷಧ ಲಭ್ಯತೆ, ತಪಾಸಣೆಗಳ ವೇಗ ಮತ್ತು ಮೂಲಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.

ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ದೀಪಕ್, ಕೇಂದ್ರದಲ್ಲಿ ಲಭ್ಯವಿರುವ ಆರೋಗ್ಯ ಸೇವೆಗಳು, ಸಿಬ್ಬಂದಿ ವ್ಯವಸ್ಥೆ, ರೋಗಿಗಳ ನಿರ್ವಹಣೆ ಹಾಗೂ ಸೌಲಭ್ಯಗಳ ಬಗ್ಗೆ ವಿವರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-26-1210817266

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.