ಭಾನುವಾರ, ಜುಲೈ 25, 2021
28 °C

ವಿಜಯಪುರ: ಧಾರಾಕಾರ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶನಿವಾರ ರಾತ್ರಿ ಮತ್ತು ಭಾನುವಾರ ಸಂಜೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ.

ನಗರದ ಮಾರುಕಟ್ಟೆಯಲ್ಲಿ ವ್ಯಾಪಾರ, ವಹಿವಾಟಿಗೆ ಅಡಚಣೆಯಾಯಿತು. ಪ್ರಮುಖ ರಸ್ತೆಗಳ ಮೇಲೆ ನೀರು ಹರಿಯುವ ಜೊತೆಗೆ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಆವರಿಸಿತ್ತು. ಹೊಲ, ಜಮೀನುಗಳಲ್ಲಿ ನೀರು ನಿಂತಿದ್ದು, ಬೆಳೆಗಳಿಗೆ ಸಮಸ್ಯೆಯಾಗಿದೆ. ಹಳ್ಳಗಳು ತುಂಬಿ ಹರಿಯುತ್ತಿವೆ.

ಗಾಳಿ–ಮಳೆಯ ಪರಿಣಾಮ ನಗರದಲ್ಲಿ ಕೆಲ ಹೊತ್ತು ವಿದ್ಯುತ್‌ ಪೂರೈಕೆ ಸ್ಥಗಿತವಾಗಿತ್ತು. ವಾರಂತ್ಯದಲ್ಲಿ ಹೊರಗಡೆ ತೆರಳು ಆಗದೆ ಜನರು ಮನೆಯಲ್ಲೇ ಕಾಲ ಕಳೆಯುವಂತಾಯಿತು.

ತಾಳಿಕೋಟೆ, ನಾಲತವಾಡ, ಬಸವನ ಬಾಗೇವಾಡಿ, ಕೊಲ್ಹಾರದಲ್ಲಿ ಬಿರುಸಿನ ಮಳೆಯಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು