ತಾಳಿಕೋಟೆ: ‘ಹಿಂದೂ ಸನಾತನ ಧರ್ಮದ ಸಂಸ್ಕೃತಿ ಇಡೀ ಜಗತ್ತಿಗೆ ಮಾದರಿಯಾಗಿದೆ. ಅದರ ರಕ್ಷಣೆಗೆ ನಾವೆಲ್ಲರೂ ಒಂದಾಗುವ ಅಗತ್ಯ ಇದೆ’ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಪಟ್ಟಣದ ಮಹಾರಾಣಾ ಪ್ರತಾಪ್ ಸಿಂಹ ವೃತ್ತದಲ್ಲಿ ಶ್ರೀರಾಮ ನವಮಿ ಉತ್ಸವ ಸಮಿತಿ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ 2ನೇ ವರ್ಷದ ಶ್ರೀರಾಮ ನವಮಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

‘ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಹಾಗೂ ಜಾತಿ ವ್ಯವಸ್ಥೆಯನ್ನು ಹುಟ್ಟುಹಾಕಿದ್ದಾರೆ. ನಮ್ಮಲ್ಲಿರುವ ವ್ಯತ್ಯಾಸಗಳನ್ನು ಮರೆತು ಹಿಂದುತ್ವದ ರಕ್ಷಣೆಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ಪ್ರಾಸ್ತಾವಿಕವಾಗಿ ಮಾತನಾಡಿದರು.

ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು, ಗುಂಡಕನಾಳ ಬೃಹನ್ಮಠದ ಗುರುಲಿಂಗ ಶಿವಾಚಾರ್ಯರು, ಕೆಸರಟ್ಟಿ ಶಂಕರಲಿಂಗ ಮಠದ ಸೋಮಲಿಂಗ ಸ್ವಾಮೀಜಿ ಹಾಗೂ ವೆಂಕಟೇಶಾಚಾರ್ಯ ಗ್ರಾಮ ಪುರೋಹಿತ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಪುರಸಭೆ ಮಾಜಿ ಅಧ್ಯಕ್ಷ ದಶರಥ ಸಿಂಗ್ ಎನ್.ಮನಗೂಳಿ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಪುರಸಭೆ ಮಾಜಿ ಸದಸ್ಯ ಸುರೇಶ ಹಜೇರಿ, ಶ್ರೀರಾಮನವಮಿ ಉತ್ಸವ ಸಮಿತಿ ಅಧ್ಯಕ್ಷ ಅಮಿತಸಿಂಗ್ ಡಿ.ಮನಗೂಳಿ, ಉಪಾಧ್ಯಕ್ಷ ಸೂರಜ ಹಜೇರಿ, ಪದಾಧಿಕಾರಿಗಳಾದ ಗೋವಿಂದ ಸಿಂಗ್ ಹಜೇರಿ, ಸುಧೀರ ತಿವಾರಿ, ರಾಘು ಹಜೇರಿ, ತೇಜಶ್ವಿನಿ ಡಿಸಲೆ, ಇತರರು ಇದ್ದರು.

ವೇದಿಕೆ ಕಾರ್ಯಕ್ರಮದ ನಂತರ ಪಟ್ಟಣದ ಮಹಾರಾಣಾ ಪ್ರತಾಪ್ ಸಿಂಹ ವೃತದಿಂದ ಶೋಭಾ ಯಾತ್ರೆ ಆರಂಭವಾಗಿ, ವಿವಿಧೆಡೆ ಸಾಗಿ ಸಂಪನ್ನವಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-26-320444723

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.