ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಜಿಲ್ಲಾಡಳಿತದಿಂದ ಸ್ವಾತಂತ್ರೋತ್ಸವ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲಾಡಳಿತದಿಂದ 75ನೇ ಸ್ವಾತಂತ್ರ್ಯೋತ್ಸವ ದಿನವನ್ನು ಅಗಸ್ಟ್ 15 ರಂದು ಬೆಳಿಗ್ಗೆ 9ಕ್ಕೆ ತೊರವಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕ್ರೀಡಾಂಗಣ ‘ಜ್ಞಾನಶಕ್ತಿ’ ಆವರಣದಲ್ಲಿ ಆಯೋಜಿಸಲಾಗಿದೆ.

ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಧ್ವಜಾರೋಹಣ ನೆರವೇರಿಸಲಿದ್ದಾರೆ.

ವಿರೋಧಪಕ್ಷದ ನಾಯಕ ಎಸ್.ಆರ್ ಪಾಟೀಲ್, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ  ಬಸವನಗೌಡ ಪಾಟೀಲ್ ಯತ್ನಾಳ್, ಶಿವಾನಂದ ಪಾಟೀಲ್, ಯಶವಂತರಾಯಗೌಡ ಪಾಟೀಲ್, ಎಂ.ಬಿ. ಪಾಟೀಲ್, ದೇವಾನಂದ ಚವ್ಹಾಣ್, ಸೋಮನಗೌಡ ಪಾಟೀಲ್, ವಿಧಾನ ಪರಿಷತ್‌ ಸದಸ್ಯ ಅರುಣ ಶಹಾಪೂರ, ಪ್ರಕಾಶ ರಾಠೋಡ, ಸುನಿಲ್‍ಗೌಡ ಪಾಟೀಲ್, ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.  

ಕಾರ್ಯಕ್ರಮದಲ್ಲಿ ಪಥ ಸಂಚಲನ, ಸನ್ಮಾನ ಕಾರ್ಯಕ್ರಮ ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸ್ವಾತಂತ್ರೋತ್ಸವದ ಅಂಗವಾಗಿ ನಗರದ ಜಿಲ್ಲಾಡಳಿತ ಭವನ, ಜಿಲ್ಲಾ ಪಂಚಾಯ್ತಿ, ಗಾಂಧಿ ಚೌಕವನ್ನು ಬಣ್ಣ ಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.