ಇಂಡಿ: ಚಡಚಣ ತಾಲ್ಲೂಕಿನ ನಿವರಗಿಗ್ರಾಮದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮುಖ್ಯಅಡುಗೆ ಕೆಲಸಗಾರರಾಗಿದ್ದ ಭಗವಾನ್ಕಿಸನ್ಸಿಂಗ್ ಪರದೇಶಿ ಈಚೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಇಲಾಖೆಯಿಂದ ಸೂಕ್ತ ತನಿಖೆ ನಡೆಸಬೇಕು. ಇವರ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿತಿ ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಪದಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಉಮೇಶ ಲಮಾಣಿ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು.

ಸಮಿತಿಯ ಅಧ್ಯಕ್ಷ ಶಿವಾನಂದ ಕಾಮಗೊಂಡ ಮಾತನಾಡಿ, ‘ಭಗವಾನ್ ಕಿಸನ್ಸಿಂಗ್ ಪರದೇಶಿ ಅವರು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮುಖ್ಯ ಅಡುಗೆಯವರಾಗಿ 27 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ನಿಲಯದ ವಾರ್ಡನ್ ಮಾನಸಿಕ ಕಿರುಕುಳ ಕೊಡುತ್ತಿದ್ದರು ಎಂದು ಮೃತರ ಪತ್ನಿ, ಮಕ್ಕಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಹ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಸಮಿತಿಯ ಉಪಾಧ್ಯಕ್ಷ ಪ್ರಕಾಶ ಬಿರಾದಾರ, ಜಂಟಿ ಕಾರ್ಯದರ್ಶಿ ಶೈಲೇಶ ಬೀಳಗಿ ಮಾತನಾಡಿ, ‘ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರತಿ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದಲ್ಲಿನ ವ್ಯವಸ್ಥೆ ಪರಿಶೀಲಿಸಬೇಕು. ಮಕ್ಕಳ ಹಾಗೂ ಅಲ್ಲಿನ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಬೇಕು. ವಸತಿ ನಿಲಯಗಳಲ್ಲಿನ ಸಮಸ್ಯೆ ಬಗೆಹರಿಸಬೇಕು’ ಎಂದರು.

ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮೀತಿಯ ಪದಾಧಿಕಾರಿಗಳಾದ ಪ್ರಸನ್ನಕುಮಾರ ನಾಡಗೌಡ, ಶ್ರೀಮಂತ ಬಿರಾದಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-26-310246225

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.