ಇಂಡಿ: ತಾಲ್ಲೂಕಿನಾದ್ಯಂತ ಹಾಗೂ ನಗರದಲ್ಲಿ ಹೆಚ್ಚುತ್ತಿರುವ ಗಾಂಜಾ ಮತ್ತು ಮಟ್ಕಾ ಹಾವಳಿ ತಡೆಗಟ್ಟುವಂತೆ ಒತ್ತಾಯಿಸಿ, ರಾಷ್ಟೀಯ ಮಾನವ ಹಕ್ಕುಗಳ ತನಿಖಾ ಸಮಿತಿ ವತಿಯಿಂದ ಡಿವೈಎಸ್ಪಿ ಸದಾಶಿವ ಕಟ್ಟಿಮನಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿಯ ಇಂಡಿ ತಾಲ್ಲೂಕು ಅಧ್ಯಕ್ಷ ಶಿವಾನಂದ ಕಾಮಗೊಂಡ ಮಾತನಾಡಿ, ಇಂಡಿ ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಹಾಗೂ ನಗರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಯುವಕರು ಗಾಂಜಾ ಸೇವಿಸಿ, ಅಮಲಿನಲ್ಲಿ ಅಮಾಯಕ ಜನರಿಗೆ ಮತ್ತು ಮಹಿಳೆಯರಿಗೆ ತೊಂದರೆ ಕೊಡುವ ವಿವಿಧ ರೀತಿಯ ವಿಷಯಗಳು ಗಮನಕ್ಕೆ ಬಂದಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿ ತಿಳಿಸಿದರು.

ಯುವ ವ್ಯಸನಿಗಳಿಂದ ಸಮಾಜದಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ದೊಡ್ಡ ದುಷ್ಪರಿಣಾಮ ಬೀರುತ್ತದೆ. ಹಾಗಾಗಿ ತಕ್ಷಣ ಈ ದಿನದಿಂದಲೇ ತಾವುಗಳು ಈ ವಿಷಯ ಗಂಭೀರವಾಗಿ ತೆಗೆದುಕೊಂಡು ಕಾನೂನಿನ ಭಯ ಹುಟ್ಟಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.ಎಂ. ಬಿರಾದಾರ, ಸನ್ಮತಿ ಹಳ್ಳಿ, ಪ್ರಕಾಶ ಬಿರಾದಾರ, ಶೈಲೇಶ್ ಬೀಳಗಿ, ಪ್ರಸನ್ನಕುಮಾರ್ ನಾಡಗೌಡ, ಗಣೇಶ್ ಮಹಿಂದ್ರಕರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-26-1701547569

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.