ವಿಜಯಪುರ: ಗದಗದಿಂದ ಮುಂಬೈಗೆ ಸಂಚರಿಸುವ ರೈಲನ್ನು ಇಂಡಿ ನಿಲ್ದಾಣದಲ್ಲಿ ನಿಲುಗಡೆ ಮಾಡಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.

ಕರ್ನಾಟಕ–ಮಹಾರಾಷ್ಟ್ರದ ಗಡಿ ಭಾಗವಾಗಿರುವ ಇಂಡಿ ವ್ಯಾಪಾರ ವಹಿವಾಟಿನಲ್ಲಿ ಮುಂಚೂಣಿಯಲ್ಲಿದೆ. ಜೊತೆಗೆ ಅತ್ಯುತ್ತಮ ಗುಣಮಟ್ಟದ ಲಿಂಬೆ, ದ್ರಾಕ್ಷಿ, ದಾಳಿಂಬೆ ಹಾಗೂ ಇತರೆ ವಾಣಿಜ್ಯ ಬೆಳೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ರಫ್ತು ಮಾಡುತ್ತಿದ್ದು, ಜವಳಿ ವ್ಯಾಪಾರದ ಕೇಂದ್ರವಾಗಿರುವ ಇಂಡಿ ತಾಲ್ಲೂಕು, ಪ್ರಸ್ತುತ ಪುರಸಭೆಯಿಂದ ನಗರಸಭೆ ಉನ್ನತೀಕರಣಗೊಂಡಿದೆ. ಇದರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಆದಾಯ ಸಂಗ್ರಹಿಸುತ್ತಿರುವ ತಾಲ್ಲೂಕಾಗಿದೆ ಎಂದವರು ನೈರುತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿಯೇ ಅತೀ ಹೆಚ್ಚಿನ ಜನಸಂಖ್ಯೆ ಹೊಂದಿರುವ ತಾಲ್ಲೂಕಾಗಿರುವ ಇಂಡಿ ನಗರದಿಂದ ಕಡಿಮೆ ದೂರದಲ್ಲಿ ಭೀಮಾ ನದಿಯಿದೆ. ಹೆಚ್ಚಿನ ರೈತರು ಕಬ್ಬು ಬೆಳೆಯುತ್ತಿದ್ದಾರೆ. ಈ ಎಲ್ಲ ವಾಣಿಜ್ಯ ಬೆಳೆ ಬೆಳೆಯುವ ರೈತರಿಗೆ ಹಾಗೂ ವ್ಯಾಪಾರಸ್ಥರಿಗೆ ಗದಗದಿಂದ ಮುಂಬೈಗೆ ಸಂಚರಿಸುವ ಮಧ್ಯ ಮಾರ್ಗದಲ್ಲಿ ಇಂಡಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ವ್ಯವಸ್ಥೆಯಾದರೆ ಮುಂಬೈಗೆ ಹೋಗಿ ಬರುವ ವ್ಯಾಪಾರ ವಹಿವಾಟಿಗೆ ಹೆಚ್ಚಿನ ಪುಷ್ಟಿ ನೀಡಿದಂತಾಗುವುದು ಎಂದು ಇಂಡಿ ತಾಲ್ಲೂಕಿನ ಜನತೆ ಕೋರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-26-734332952

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.