ವಿಜಯಪುರ: ‘ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಬಬಲೇಶ್ವರ ತಾಲೂಕಿನ ತಿಗಣಿ ಬಿದರಿಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಕಾಖಂಡಕಿ-ಮಮದಾಪುರ, ಬಬಲೇಶ್ವರ-ಯಕ್ಕುಂಡಿ, ಕಾಖಂಡಕಿ-ತೊನಶ್ಯಾಳ ಹಾಗೂ ತಿಗಣಿ ಬಿದರಿ ಹಳ್ಳಗಳಿಗೆ ಅಡ್ಡಲಾಗಿ ಸರಣಿ ಚೆಕ್ ಡ್ಯಾಂ ಮತ್ತು ರಿಚಾರ್ಜ್ ಶಾಫ್ಟ್ ಗಳ ನಿರ್ಮಾಣ ಮಾಡುವ ಮೂಲಕ ಅಂತರ್ಜಲ ಅಭಿವೃದ್ಧಿ ಪಡಿಸುವ ಅಂದಾಜು ₹9.84 ಕೋಟಿ ಮೌಲ್ಯದ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ನೀರು ಬಳಕೆದಾರರ ಸಂಘ ರಚಿಸುವ ಮೂಲಕ ನೀರು ಬಳಕೆಯಲ್ಲಿ ಶಿಸ್ತು ತರಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಕಾಲುವೆಯ ಕೊನೆಯ ಭಾಗದವರೆಗೂ ನೀರು ತಲುಪಲು ಅನುಕೂಲವಾಗಲಿದೆ. ಇದರ ಜೊತೆಗೆ ಈಗ ಕೈಗೆತ್ತಿಕೊಳ್ಳಲಾಗಿರುವ ಹಳ್ಳಗಳನ್ನು ತುಂಬಿಸುವ ಯೋಜನೆಯಿಂದ ಅಂತರ್ಜಲ ಮತ್ತಷ್ಟು ಹೆಚ್ಚಾಗಲಿದೆ. ಕಾಲುವೆಗಳ ವ್ಯಾಪ್ತಿಯಲ್ಲಿ ಬರುವ 178 ಹಳ್ಳಗಳಿಗೆ ಎಸ್ಕೇಪ್ ಮೂಲಕ ನೀರು ಹರಿಸಲಾಗುವುದು. ಪ್ರತಿ ಕಿಲೋ ಮೀಟರ್ ಗೊಂದರಂತೆ ಚೆಕ್ ಡ್ಯಾಂ ನಿರ್ಮಾಣದಿಂದ ಸುಮಾರು 400 ಕಿ.ಮೀ. ವ್ಯಾಪ್ತಿಯಲ್ಲಿ ಅಂತರ್ಜಲ ವೃದ್ಧಿಸಿ ಬೇಸಿಗೆಯಲ್ಲಿ ನೀರಿನ ಸಮಸ್ಯೆಗೆ ಸೂಕ್ತ ಪರಿಹಾರ ಸಿಗಲಿದೆ’ ಎಂದರು.

ಕೆಎಂಎಫ್ ಮಾಜಿ ಅಧ್ಯಕ್ಷ ಶ್ರೀಶೈಲಗೌಡ ಪಾಟೀಲ ನಿಡೋಣಿ, ಮುಖಂಡ ಚನ್ನಪ್ಪ ಕೊಪ್ಪದ ಮಾತನಾಡಿದರು. ಜಿ.ಪಂ.ಮಾಜಿ ಅಧ್ಯಕ್ಷ ವಿ.ಎಸ್.ಪಾಟೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಬಲೇಶ್ವರ ತಾಲೂಕು ಅಧ್ಯಕ್ಷ ಮಲ್ಲಪ್ಪ ದಳವಾಯಿ, ಎಂಜಿನಿಯರ್ ವಿಶ್ವನಾಥ ಪೀರಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-26-725860654

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.