ಶುಕ್ರವಾರ, ಆಗಸ್ಟ್ 7, 2020
22 °C

ದ್ವಿತೀಯ ಪಿಯು ಫಲಿತಾಂಶದಲ್ಲಿ ವಿಜಯಪುರಕ್ಕೆ ಕೊನೆಯ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳ ಕಳಪೆ ಸಾಧನೆಯಿಂದಾಗಿ ರಾಜ್ಯಮಟ್ಟದಲ್ಲಿ ವಿಜಯಪುರ ಕೊನೆಯ ಸ್ಥಾನ ಗಳಿಸಿದೆ. 

ಪರೀಕ್ಷೆ ಬರೆದ 23,607 ವಿದ್ಯಾರ್ಥಿಗಳ ಪೈಕಿ 12,799 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೇ 54.22 ಫಲಿತಾಂಶ ಲಭ್ಯವಾಗಿದೆ.  

ಕಳೆದ ವರ್ಷ, 2019ರಲ್ಲಿ ಶೇ 68.55 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಮೂಲಕ ಜಿಲ್ಲೆಯು ರಾಜ್ಯ ಮಟ್ಟದಲ್ಲಿ 14ನೇ ಸ್ಥಾನ ಪಡೆದುಕೊಂಡಿತ್ತು.

ಕಲಾ ವಿಭಾಗದಲ್ಲಿ ಶೇ 43.22, ವಾಣಿಜ್ಯ ವಿಭಾಗದಲ್ಲಿ ಶೇ 61.28 ಮತ್ತು ವಿಜ್ಞಾನ ವಿಭಾಗದಲ್ಲಿ ಶೇ 68.11ರಷ್ಟು ಫಲಿತಾಂಶ ಲಭಿಸಿದೆ. 

ಜಿಲ್ಲೆಯಲ್ಲಿ ಶೇ 58.81ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಶೇ 43.90ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ್ ದಡ್ಡಿ 'ಪ್ರಜಾವಾಣಿ' ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು