ವಿಜಯಪುರ: ಜಲಧಾರೆ ಹಾಗೂ ಹರ್ ಘರ್ ಜಲ್ ಯೋಜನೆಗಳ ಕಾಮಗಾರಿಗಳಿಗೆ ವೇಗ ನೀಡುವಂತೆ ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಲಧಾರೆ ಯೋಜನೆ ಶೇ 81.25ರಷ್ಟು ಮಾತ್ರ ಪೂರ್ಣಗೊಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, 2027ರ ಫೆಬ್ರುವರಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಯೋಜನೆಯನ್ನು ಕಾರ್ಯರೂಪಕ್ಕೆ ತರಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ಜಿಲ್ಲೆಯ ಹಲವು ಗ್ರಾಮಗಳಲ್ಲಿ ಪೈಪ್ಲೈನ್ ಕಾಮಗಾರಿ ಬಾಕಿ ಉಳಿದಿರುವುದು ಆತಂಕಕಾರಿಯಾಗಿದ್ದು, ಈಗಾಗಲೇ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳು ಪರಿಹಾರವಾಗಿದ್ದರೂ, ಇದುವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲವೆಂದು ಗುತ್ತಿಗೆದಾರರ ಮೇಲೆ ಗರಂ ಆದರು. ಜೂನ್ 15ರೊಳಗೆ ಎಲ್ಲಾ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಆದೇಶಿಸಿದರು.

ಇನ್ನು ಪೈಪ್ಲೈನ್ ಪೂರ್ಣಗೊಂಡ ಗ್ರಾಮಗಳಲ್ಲಿ ಹೈಡ್ರೋ ಟೆಸ್ಟಿಂಗ್ ಪ್ರಕ್ರಿಯೆಯನ್ನು ತ್ವರಿತಗೊಳಿಸಿ ಕನಿಷ್ಠ ಶೇ. 70ರಷ್ಟು ಗುರಿ ಸಾಧಿಸಲು ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಲೈನ್ ಕ್ರಾಸಿಂಗ್ ಹಾಗೂ ಅರಣ್ಯ ಇಲಾಖೆಯ ಅನುಮತಿಗಳ ಬಾಕಿಯನ್ನು ಶೀಘ್ರ ಇತ್ಯರ್ಥಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಸವನಬಾಗೇವಾಡಿ ಮತ್ತು ಇಂಡಿ ತಾಲ್ಲೂಕುಗಳಲ್ಲಿ ನೀರು ಸಂಗ್ರಹಗಾರಗಳ (ಓಎಚ್ಟಿ) ಅಗತ್ಯವಿರುವ ಗ್ರಾಮಗಳಲ್ಲಿ ಹೊಸ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಜಲಧಾರೆ, ಹರ್ ಘರ್ ಜಲ್ ಯೋಜನೆಗೆ ಸಂಬಂಧಿಸಿದ ಎಲ್ಲ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಎಂಜಿನಿಯರ್ , ಕಿರಿಯ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನೀಯರರು ಹಾಗೂ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಇದ್ದರು.

‘ಹರ್ ಘರ್ ಜಲ್’ ಘೋಷಿಸಲು ಸೂಚನೆ

ಹರ್ ಘರ್ ಜಲ್ ಯೋಜನೆಯ ಪ್ರಗತಿ ತುಂಬಾ ಕಡಿಮೆಯಾಗಿದ್ದು, ಪ್ರತಿ ಇಂಜಿನಿಯರ್ಗೆ ಐದು ಗ್ರಾಮಗಳನ್ನು ಗುರಿಯಾಗಿ ನಿಗದಿ ಮಾಡಿ, ಮೇ 18ರೊಳಗೆ ಕನಿಷ್ಠ 100 ಗ್ರಾಮಗಳನ್ನು ‘ಹರ್ ಘರ್ ಜಲ್’ ಘೋಷಿಸಲು ಸೂಚಿಸಿದರು. ಸಮಸ್ಯೆಯಿರುವ ಗ್ರಾಮಗಳಿಗೆ ಭೇಟಿ ನೀಡಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ನೀರು ಸರಬರಾಜಿಗೆ ಮುನ್ನ ಗುಣಮಟ್ಟ ಪರೀಕ್ಷೆ ಕಡ್ಡಾಯವಾಗಿದ್ದು, ಸಹಾಯವಾಣಿ ಸೇವೆಗಳು ನಿರಂತರ ಕಾರ್ಯನಿರ್ವಹಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.