ವಿಜಯಪುರ (ದೇವನಹಳ್ಳಿ): ಜಪಾನ್ ಅಂತರ ರಾಷ್ಟ್ರೀಯ ಸಹಕಾರ ಸಂಸ್ಥೆಯ (ಜೈಕಾ) ಅಧಿಕಾರಿಗಳ ತಂಡ ಗುರುವಾರ ವಿಜಯಪುರಕ್ಕೆ ಭೆಟಿ ನೀಡಿ ಕಾವೇರಿ 6ನೇ ಹಂತದ ನೀರು ಸರಬರಾಜು ಯೋಜನೆ ಕುರಿತು ಅಧ್ಯಯನ ನಡೆಸಿತು.

ಪರಿಸರ, ಸಾಮಾಜಿಕ ಮತ್ತು ಹವಾಮಾನ ವಿಷಯ ಪರಿಣತಿ ಮಿಕಿಕೊ ಅಜುಮ, ಪರಿಸರ ಸಾಮಾಜಿಕ ವಿಷಯ ಪರಿಣತಿ ಕಾನಾನಿನೊ, ಆರ್ಥಿಕ ಮತ್ತು ವಾಣಿಜ್ಯ ವಿಶ್ಲೇಷಕಿ ಇಮಿಕೊ ಪುಜಿತ ನೇತೃತ್ವದ ತಂಡ ಮೊದಲಿಗೆ ಪುರಸಭೆ ಕಾರ್ಯಾಲಯಕ್ಕೆ ಭೇಟಿ ನೀಡಿ, ಶುದ್ಧ ಕುಡಿಯುವ ನೀರಿನ ಲಭ್ಯತೆ, ಸಮಸ್ಯೆ ಕುರಿತು ಪುರಸಭೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಚರ್ಚಿಸಿದರು.

ನಂತರ ಚಿಕ್ಕಬಳ್ಳಾಪುರ ರಸ್ತೆ ಮಾರ್ಗದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಬಳಿ ತೆರಳಿದ ತಂಡ, ಅಲ್ಲಿನ ವ್ಯವಸ್ಥೆಯ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದರು. ನೀರಿನ ಸಂಗ್ರಹ ಟ್ಯಾಂಕ್ ಗಳ ಸಾಮಥ್ರ್ಯದ ಕುರಿತು ಸ್ಥಳೀಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಹಲವು ಮನೆಗಳಿಗೆ ಭೇಟಿ ನೀಡಿ ಜನರ ಬಳಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ವಿಚಾರಿಸಿದರು.

ವಿಜಯಪುರ ಪಟ್ಟಣದ ವ್ಯಾಪ್ತಿ ದಿನೇದಿನೇ ಬೆಳೆಯುತ್ತಿದೆ. ಜನಸಂಖ್ಯೆ ಹೆಚ್ಚಳವಾಗುತ್ತಿದ್ದು, ಶುದ್ಧ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ.ಪಟ್ಟಣದ ನಿವಾಸಿಗಳು ಕುಡಿಯಲು ಕೊಳವೆ ಬಾವಿಯ ನೀರನ್ನು ಆಶ್ರಯಿಸಿದ್ದು, ಕಾವೇರಿ 6 ನೇ ಹಂತದ ನೀರು ಸರಬರಾಜು ಯೋಜನೆಯನ್ನು ವಿಜಯಪುರ ಪಟ್ಟಣಕ್ಕೆ ಅನುಷ್ಠಾನಗೊಳಿಸಿದರೆ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಧಿಕಾರಿಗಳ ತಂಡಕ್ಕೆ ಪುರಸಭೆ ಅಧ್ಯಕ್ಷೆ ಭವ್ಯ ಮಹೇಶ್ ಅವರು ವಿವರಿಸಿದರು.

ಇಲ್ಲಿ ಯಾವುದೇ ನದಿ ಮೂಲಗಳು ಇಲ್ಲ. ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದೆ. ಕುಡಿಯುವ ನೀರಿಗಾಗಿ ಸಾವಿರಾರು ಅಡಿ ಆಳ ಕೊಳವೆ ಬಾವಿಗಳನ್ನು ಕೊರೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಬೇಕಾಗಿದೆ. ಅಷ್ಟು ಆಳ ಕೊರೆದರೂ ನೀರು ಲಭ್ಯತೆಯ ಬಗ್ಗೆ ಖಾತರಿ ಇರುವುದಿಲ್ಲ ಎಂದು ಅಧಿಕಾರಿಗಳ ತಂಡಕ್ಕೆ ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ್ ತಿಳಿಸಿದರು.

ಸಾವಿರಾರು ಅಡಿಯ ಆಳದ ಕೊಳವೆ ಬಾವಿಗಳಿಂದ ಸಿಗುವ ನೀರು ಜನ-ಜಾನುವಾರುಗಳ ಆರೋಗ್ಯದ ಮೇಲೆ ನಾನಾ ರೀತಿಯ ಪರಿಣಾಮ ಬೀಳುತ್ತಿದೆ. ಕಾವೇರಿ 6 ನೇ ಹಂತದ ನೀರು ಸರಬರಾಜು ಯೋಜನೆ ಜಾರಿಯಾದಲ್ಲಿ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆಗೆ ಮುಕ್ತಿ ಸಿಗಲಿದ್ದು, ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಪುರಸಭೆ ಸದಸ್ಯ ನಂದಕುಮಾರ್ ತಿಳಿಸಿದರು.

ಪುರಸಭೆ ಸದಸ್ಯರಾದ ಸಿ.ಎಂ.ರಾಮು, ನಾರಾಯಣಸ್ವಾಮಿ, ವಿಮಲಾ, ಪರಿಸರ ಎಂಜಿನಿಯರ್ ಶೇಖರ್ ರೆಡ್ಡಿ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-15-303698545

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.