ವಿಜಯಪುರ: ಕಲಕೇರಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿರುದ್ಧ ಸಮಗ್ರ ತನಿಖೆ ನಡೆಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಆರೋಪಿಸಿ, ದಲಿತ ಸಂಘರ್ಷ ಸಮಿತಿ ಹಾಗೂ ರೈತ ಸಂಘದ ನೇತೃತ್ವದಲ್ಲಿ ಕಲಕೇರಿ ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಂಗಳ ವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ಭ್ರಷ್ಟಾಚಾರ ತನಿಖೆ ಕುರಿತು ಕಳೆದ ಫೆ.16 ರಂದು ಕಲಕೇರಿಯಿಂದ ವಿಜಯಪುರದವರೆಗೆ ಪಾದಯಾತ್ರೆ ನಡೆಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು ಈ ವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸರ್ವೇ ನಂ.1ರಲ್ಲಿ ನಿರ್ಮಿಸಲಾದ ವಾಣಿಜ್ಯ ಮಳಿಗೆಗಳಿಗೆ ಹಣ ವಸೂಲಿ ಮಾಡಿದ ಆರೋಪದಡಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು, 15ನೇ ಹಣಕಾಸಿನಲ್ಲಿ ಮಳಿಗೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಕಲಿ ಬಿಲ್ ಸೃಷ್ಟಿಸಿ ಹಣ ದುರುಪಯೋಗ ಮಾಡಿದವರ ವಿರುದ್ಧ ತನಿಖೆ ನಡೆಸುವುದು, ಅಲ್ಲದೇ, ತನಿಖಾ ತಂಡದಿಂದ ವರದಿ ವಿಳಂಬವಾಗಿರುವುದಕ್ಕೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡುವುದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವುದು ಹಾಗೂ ತಾಲೂಕು ಆಡಳಿತದ ನಿರ್ಲಕ್ಷ್ಯದ ವಿರುದ್ಧ ಕ್ರಮ ಜರುಗಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಇನ್ನು ಸ.ನಂ 1ರ ಪಕ್ಕದಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಿ, ಸುಮಾರು 40 ಕುಟುಂಬಗಳಿಗೆ ಜೀವನೋಪಾಯಕ್ಕಾಗಿ ಶೆಡ್ ನಿರ್ಮಿಸಲು ಅನುಮತಿ ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಭೇಟಿ ನೀಡಿ ಮನವೊಲಿಸಲು ಯತ್ನಿಸಿದರೂ ಅದು ವಿಫಲವಾಯಿತು.

ಈ ಸಂದರ್ಭದಲ್ಲಿ ಸೋಮಶೇಖರ ಬಡಿಗೇರ, ಹಣಮಂತ ವಡ್ಡರ, ಪ್ರಕಾಶ ದೊಡಮನಿ, ಸಲೀಂ ಬಡಿಮಗೊಳ, ಇಂತಿಯಾಜ ಹೊರಪೇಟೆ, ರಫೀಕ್ ಮಂದೇವಾಲ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-26-1756977102

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.