ವಿಜಯಪುರ: ‘ಅನೇಕ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದ ಮಾಜಿ ಶಾಸಕ ದಿ.ಆರ್.ಆರ್. ಕಲ್ಲೂರ ದಂಪತಿಯ ಐದನೇಯ ವರ್ಷದ ಪುಣ್ಯಸ್ಮರಣೆಯನ್ನು ಮೇ 21ರಂದು ಬೆಳಿಗ್ಗೆ 10.30ಕ್ಕೆ ಕಿತ್ತೂರ ರಾಣಿ ಚನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು’ ಎಂದು ಸಹಕಾರಿ ಧುರೀಣ ಮಲ್ಲಿಕಾರ್ಜುನ ಲೋಣಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆದರ್ಶ ರಾಜಕಾರಣಿ, ಆದರ್ಶ ಸತಿ-ಪತಿಗೆ ಉದಾಹರಣೆ ಕಲ್ಲೂರ ದಂಪತಿ. ಶಾಸಕರಾಗಿ, ಕರ್ನಾಟಕ ಭೂಸೇನಾ ನಿಗಮದ ಅಧ್ಯಕ್ಷರಾಗಿ ಮಹೋನ್ನತ ಕೊಡುಗೆಯನ್ನು ಕಲ್ಲೂರ ನೀಡಿದ್ದಾರೆ. ಅವರ ಪತ್ನಿ ದಿ.ಮೀನಾಕ್ಷಿ ಕಲ್ಲೂರ ಅವರು ವಿಜಯಪುರದಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಬ್ಯಾಂಕ್ ಆರಂಭಿಸಿ ಮಹಿಳಾ ಸಬಲೀಕರಣಕ್ಕೆ ಮುನ್ನುಡಿ ಬರೆದವರು’ ಎಂದು ನೆನೆದರು.

‘ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಡೆಯಲಿರುವ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಭಾವತಿ ಧರ್ಮಸಿಂಗ್, ಸಚಿವರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಎಚ್.ಕೆ. ಪಾಟೀಲ, ದಿನೇಶ್ ಗುಂಡೂರಾವ್ ಭಾಗವಹಿಸಲಿದ್ದಾರೆ. ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ‘ಅನೇಕ ಬಾರಿ ಸ್ಮರಣೋತ್ಸವ ಆಚರಿಸುವ ಉದ್ದೇಶ ಹೊಂದಲಾಗಿತ್ತು, ಆದರೆ ವಿವಿಧ ಕಾರಣಗಳಿಂದ ಸಾಧ್ಯವಾಗಲೇ ಇಲ್ಲ. ಈಗ ಎಲ್ಲರೂ ಸೇರಿ ಅಭೂತಪೂರ್ವವಾಗಿ ಆಚರಣೆ ನಡೆಸಲಿದ್ದೇವೆ’ ಎಂದರು.

ಮಲ್ಲಿಕಾರ್ಜುನ ಕಲ್ಲೂರ, ಸುನೀಲ ಕಲ್ಲೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-26-1069531936

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.