ವಿಜಯಪುರ: ‘ಕನ್ನಡ ನಾಡಿನ ಅಸ್ಮಿತೆಯ ಪ್ರತೀಕವಾದ ಕನ್ನಡ ಸಾಹಿತ್ಯ ಪರಿಷತ್, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಭಾಷೆಗಾಗಿ ಶ್ರಮಿಸಲು ಕಟ್ಟಿರುವ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಇದು ಕನ್ನಡಿಗರ ಜೀವನಾಡಿಯಾಗಿದೆ’ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

ತಾಲ್ಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡ ಕನ್ನಡ ಸಾಹಿತ್ಯ ಪರಿಷತ್ತಿನ 112 ನೇ ಸಂಸ್ಥಾಪನಾ ದಿನವನ್ನು ಉದ್ಘಾಟಿಸಿ ಮಾತನಾಡಿದರು.

‘ಕಸಾಪ ಎಂಬುದು ಕನ್ನಡ, ಸಾಹಿತ್ಯ ಮತ್ತು ಜನತೆಯ ಹದವರಿತ ಸಂಗಮ. ಅದು ಕನ್ನಡಿಗರ ಪಾಲಿಗೆ ಮೂರಕ್ಷರದ ಗಾಯತ್ರಿ ಮಂತ್ರವಿದ್ದಂತೆ. ಕನ್ನಡ ಸಾಹಿತ್ಯವನ್ನು ಜನ ಸಾಮಾನ್ಯರು ಅರಿಯುವಂತೆ ಮಾಡುವಲ್ಲಿ ಸಾಹಿತ್ಯ ಪರಿಷತ್ ಸೇವೆ ಅನನ್ಯ’ ಎಂದು ಅವರು ತಿಳಿಸಿದರು.

ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಮಾತನಾಡಿ, ‘1915 ರಲ್ಲಿ ಆರಂಭವಾದ ಕನ್ನಡ ಸಾಹಿತ್ಯ ಪರಿಷತ್ತು ಈಗ ಕನ್ನಡಿಗರ ಹೆಮ್ಮೆಯಾಗಿ ಹೊರಹೊಮ್ಮಿದೆ. ಭಾಷೆಗಾಗಿ ತಮ್ಮ ಜೀವನ ಮುಡಿಪಾಗಿಟ್ಟು, ಸಾಹಿತ್ಯಿಕವಾಗಿ ತಮ್ಮ ಅಮೂಲ್ಯ ಕೊಡುಗೆ ನೀಡಿದ ನೂರಾರು ಕವಿ, ಸಾಹಿತಿ, ಚಿಂತಕರ ಸೇವೆ ನಮಗೆಲ್ಲರಿಗೂ ಪ್ರೇರಣೆ ಆಗಿದೆ’ ಎಂದು ಹೇಳಿದರು.

ಸಂಸ್ಥೆಯ ಕಾರ್ಯದರ್ಶಿ ಸುನಂದಾ ಹುಣಶ್ಯಾಳ, ಶಿಕ್ಷಕರಾದ ರೇಣುಕಾ ಭಜಂತ್ರಿ, ಸಂಗೀತಾ ಅಂಕಲಗಿ, ವೀರೇಶ ಹುಣಶ್ಯಾಳ ಹಾಗೂ ಪಾಲಕರು, ಮಕ್ಕಳು, ಶಾಲಾ ಸಿಬ್ಬಂದಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-26-110541635

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.