ತಾಳಿಕೋಟೆ: ತಾಲ್ಲೂಕಿನ ಕೊಣ್ಣೂರ ಗ್ರಾಮದಲ್ಲಿ ಅಸ್ಕಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಬಾಗಲಕೋಟೆ ಹಾಗೂ ಬಿ.ಎಸ್.ಪಾಟೀಲ ಫೌಂಡೇಷನ್ (ಸಾಸನೂರ) ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಮಹಾ ಶಿಬಿರ ಮಾರ್ಚ್ 22ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿದೆ.

ವಿವಿಧ ರೋಗಗಳ ತಪಾಸಣೆ ನಡೆಸಿ ಔಷಧಿಗಳನ್ನು ವಿತರಿಸಲಾಗುವುದು ಹಾಗೂ ಹೆಚ್ಚಿನ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರನ್ನು ಉಚಿತವಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುವುದು.

ಈ ಶಿಬಿರದ ಉದ್ಘಾಟನಾ ಸಮಾರಂಭವು ಬೆಳಿಗ್ಗೆ 9 ಗಂಟೆಗೆ ಕೊಣ್ಣೂರ ಗ್ರಾಮದ ಬಲವಂತ್ರಾಯ ಹಡಲಗೇರಿ ಪ್ರೌಢಶಾಲೆಯಲ್ಲಿ ನಡೆಯಲಿದ್ದು, ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಸಾನ್ನಿಧ್ಯ ವಹಿಸುವರು.

ಕೆ.ಎಸ್.ಡಿ.ಎಲ್.ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು. ದೇವರ ಹಿಪ್ಪರಗಿ ಮತಕ್ಷೇತ್ರ ಮಾಜಿ ಶಾಸಕ ಸೋಮನಗೌಡ ಬಿ.ಪಾಟೀಲ ಸಾಸನೂರ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರಭುಗೌಡ ಚ.ದೇಸಾಯಿ ಅಸ್ಕಿ ಫೌಂಡೇಷನ್ ಕೊಣ್ಣೂರ ಅಧ್ಯಕ್ಷ ಸಿ.ಬಿ.ಅಸ್ಕಿ, ಕೃಷಿ ನೋಡಲ್ ಅಧಿಕಾರಿ ಮಹೇಶ ಜೋಶಿ, ಡಾ.ಪ್ರೀತಿ ವಿಜಯ್ ಅಸ್ಕಿ ಹಾಗೂ ಡಾ.ವಿಜಯ್ ಅಸ್ಕಿ ಹಾಗೂ ಪಾಟೀಲ ಕುಟುಂಬದ ಪ್ರಮುಖರು ಉಪಸ್ಥಿತರಿರುವರು ಎಂದು ಡಾ.ಬಸವರಾಜ ಅಸ್ಕಿ (ಕೊಣ್ಣೂರ) ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-26-103782185

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.