ವಿಜಯಪುರ (ದೇವನಹಳ್ಳಿ): ಯಲುವಹಳ್ಳಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪಿನ ನಡುವೆ ಗಲಾಟೆ ನಡೆದಿದೆ.

ಹಲವು ವರ್ಷಗಳಿಂದ ಯಲುವಹಳ್ಳಿ ಗ್ರಾಮದ ಸರ್ವೆ ನಂ. 33 ರಲ್ಲಿ 2.34 ಗುಂಟೆ ಜಮೀನಿನಲ್ಲಿ ದಲಿತ ಮಹಿಳೆ ಮಂಜುಳಾ ಕುಟುಂಬದವರು ಸ್ವಾಧೀನದಲ್ಲಿದ್ದಾರೆ. ಜಮೀನು ವಿಚಾರವಾಗಿ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ.

ಮೇ 11 ರಂದು ಮಂಜುಳಾ ಮೇವು ಕೊಯ್ಲು ಮಾಡಲು ಜಮೀನಿಗೆ ತೆರಳಿದಾಗ ಇದೇ ಗ್ರಾಮದ ವೆಂಕಟರೆಡ್ಡಿ ಜಮೀನಿಗೆ ತೆರಳಿ ತಂತಿ ಬೇಲಿ ಹಾಕಿಸಿ, ಯಂತ್ರದ ಮೂಲಕ ಜಮೀನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸಿದ್ದಾರೆ. ಇದನ್ನು ಪ್ರಶ್ನಿಸಿದ ಮಂಜುಳಾಗೆ ವೆಂಕಟರೆಡ್ಡಿ ಅವರ ಕುಟುಂಬ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ನಿಂದನೆ ಮಾಡಿ ಜಮೀನಿನಿಂದ ಹೊರ ಹಾಕಿದ್ದಾರೆ. ಗಲಾಟೆಯಲ್ಲಿ ಗಾಯಗೊಂಡ ಮಂಜುಳಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ವೆಂಕಟರೆಡ್ಡಿ ಸೇರಿ ಒಟ್ಟು ಏಳು ಮಂದಿ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-16-2005854226

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.