ಚಡಚಣ: ‘ಸಮಾಜದ ಪ್ರತಿಯೊಬ್ಬ ನಾಗರಿಕರು ತಮ್ಮ ಕಾನೂನು, ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ತಿಳಿದುಕೊಳ್ಳುವುದು ಅತ್ಯಂತ ಅವಶ್ಯಕ’ ಎಂದು ತಾಲ್ಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ಸೆಷನ್ಸ್ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.

ತಾಲೂಕಿನ ಬರಡೋಲ ಗ್ರಾಮದ ಆನಂದ ಆಶ್ರಮದಲ್ಲಿ ವಿಜಯಪುರ ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಇಂಡಿ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಇಂಡಿ ವಕೀಲರ ಸಂಘ ಸಂಯುಕ್ತ ಆಶ್ರಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾನೂನು ಅರಿವು–ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಕೀಲ ಬಿ.ಎಂ. ಅವತಾಡೆ, ಕಾನೂನು ಅರಿವು ಮತ್ತು ನೆರವಿನ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಜಿ. ಬಿರಾದರ ಮಾತನಾಡಿ, ‘ಬಡವರು, ಮಹಿಳೆಯರು, ಮಕ್ಕಳು ಹಾಗೂ ಹಿಂದುಳಿದ ಜನತೆಗೆ ಉಚಿತವಾಗಿ ಕಾನೂನು ಅರಿವು–ನೆರವು ದೊರೆಯುವ ಬಗ್ಗೆ ಅರಿವು ಮೂಡಿಸುವುದೇ ಈ ಯೋಜನೆಯ ಉದ್ದೇಶವಾಗಿದೆ’ ಎಂದರು.

ಜಿಲ್ಲಾ ವಕೀಲರ ಸಂಘದ ಮಾಜಿ ಉಪಾಧ್ಯಕ್ಷ ಜಿ.ಎಸ್. ಪವಾರ್ ಮಾತನಾಡಿ, ‘ಯಾರೇ ಅನ್ಯಾಯಕ್ಕೆ ಒಳಗಾದರೂ ಹೆದರದೇ ಕಾನೂನು ನೆರವು ಪಡೆಯಬೇಕು’ ಎಂದರು.

ಸಾನ್ನಿಧ್ಯ ವಹಿಸಿದ್ದ ಜ್ಯೋತಿ ಪ್ರಕಾಶ್ ಮಹಾರಾಜ ಹಾಗೂ ಅಂಜುಟಗಿ ಆಶ್ರಮದ ಸಾಧು ಮಹಾರಾಜರು ಆಶೀರ್ವಚನ ನೀಡಿದರು. ಕಿರಿಯ ಸೆಷನ್ಸ್ ನ್ಯಾಯಾಧೀಶ ವಿಕಾಸ್ ದಳವಾಯಿ, ವಕೀಲರಾದ ಎ.ಎ. ಗಜಕೋಶ, ಎಸ್.ಎಸ್. ಪಾಟೀಲ್, ಲಕ್ಷ್ಮಿ ಪಾಂಡ್ರೆ, ಎಸ್.ಬಿ. ಪಾಟೀಲ್, ಎಸ್.ಎಸ್. ಬಿರಾದಾರ್, ಎಸ್.ಆರ್. ಬಿರಾದಾರ್, ಶಿಕ್ಷಕರಾದ ಎಸ್.ಕೆ. ಮೈತ್ರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-26-1825875327

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.