ವಿಜಯಪುರ: ನ್ಯಾಯ ವ್ಯವಸ್ಥೆಯಲ್ಲಿ ನಿಖರವಾದ ತನಿಖೆ ಮತ್ತು ದೃಢವಾದ ಸಾಕ್ಷ್ಯಿಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹರೀಶ ಎ. ಹೇಳಿದರು.

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕಾನೂನು ಶಾಲೆ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಅಪರಾಧ ಕಾನೂನುಗಳು, ವಿಶೇಷ ಕಾಯ್ದೆಗಳು ಮತ್ತು ಫಾರೆನ್ಸಿಕ್ ವಿಜ್ಞಾನ ಕುರಿತ ಎರಡು ದಿನಗಳ ಕರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಫೋರೆನ್ಸಿಕ್ ವಿಜ್ಞಾನವು ನ್ಯಾಯ ನಿರ್ಣಯದಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ತಂತ್ರಜ್ಞಾನ ಮತ್ತು ಕಾನೂನುಗಳ ಸಮನ್ವಯ ಅಗತ್ಯವಾಗಿದೆ ಎಂದು ಹೇಳಿದರು.

ವಿಜಯಪುರ ಎಸ್ಪಿ ಲಕ್ಷ್ಮಣ ಬಿ.ನಿಂಬರಗಿ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ಸೈಬರ್ ಅಪರಾಧಗಳು ಮತ್ತು ಸಂಘಟಿತ ಅಪರಾಧಗಳು ಹೆಚ್ಚುತ್ತಿದ್ದು, ತನಿಖೆ ಪ್ರಕ್ರಿಯೆಯಲ್ಲಿ ವಿಜ್ಞಾನಾಧಾರಿತ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಿದೆ. ವಿದ್ಯಾರ್ಥಿಗಳು ತಮ್ಮ ಕಾನೂನು ಜ್ಞಾನವನ್ನು ಪ್ರಾಯೋಗಿಕವಾಗಿ ಬಳಸಬೇಕು ಎಂದು ಕರೆ ನೀಡಿದರು.

ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ವೈ.ಎಂ.ಜಯರಾಜ ಮಾತನಾಡಿ, ಕಾನೂನು ಮತ್ತು ವೈದ್ಯಕೀಯ ಕ್ಷೇತ್ರಗಳ ನಡುವೆ ಸಮನ್ವಯವು ಉತ್ತಮ ನ್ಯಾಯ ವ್ಯವಸ್ಥೆ ರೂಪಿಸಲು ಸಹಾಯಕವಾಗುತ್ತದೆ. ಇಂದಿನ ಸಮಾಜದಲ್ಲಿ ಸಾಮಾಜಿಕ ಜಾಲತಾಣಗಳನ್ನು ಯುವಕರು ಜವಾಬ್ದಾರಿಯುತವಾಗಿ ಬಳಸಬೇಕು. ಇಂಥ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಸಂಶೋಧನೆ ಮನೋಭಾವನೆ ಮತ್ತು ವೃತ್ತಿಪರ ಕೌಶಲಗಳನ್ನು ಬೆಳೆಸುತ್ತವೆ ಎಂದು ಹೇಳಿದರು.

ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಕಾನೂನು ಶಾಲೆಯ ಡೀನ್ ಮತ್ತು ಪ್ರಾಚಾರ್ಯ ರಘುವೀರ ಕುಲಕರ್ಣಿ, ವೈದ್ಯಕೀಯ ಕಾಲೇಜಿನ ಡೀನ್ ಡಾ.ತೇಜಸ್ವಿನಿ ವಲ್ಲಭ, ಸಂಪನ್ಮೂಲ ವ್ಯಕ್ತಿಗಳಾದ, ಡಿ.ಎಸ್.ಪಿ (ಸಿಐಡಿ) ಯಶವಂತ, ಎಫ್.ಎಸ್.ಎಲ್ ವಿಭಾಗದ ನಿವೃತ್ತ ಉಪನಿರ್ದೇಶಕ ವಿ.ಜಿ.ನಾಯಕ, ನಿವೃತ್ತ ಸಹಾಯಕ ನಿರ್ದೇಶಕ ಬಿ.ಸಿ.ರವೀಂದ್ರ, ಸಿಐಡಿ ಘಟಕದ ಕಾನೂನು ಹಿರಿಯ ಸಲಹೆಗಾರ ಮಹೇಶ್ ವೈದ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-26-481324825

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.