ಬುಧವಾರ, ಜುಲೈ 28, 2021
28 °C

ಲಾಕ್ ಡೌನ್‌ಗೆ ವಿಜಯಪುರದಲ್ಲಿ ಉತ್ತಮ ಪ್ರತಿಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಯಲು ಸರ್ಕಾರ ಜಾರಿಗೊಳಿಸಿರುವ ಭಾನುವಾರದ ಲಾಕ್ ಡೌನ್ ಗೆ ಗುಮ್ಮಟ ನಗರಿ ವಿಜಯಪುರ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾನುವಾರದ ಕರ್ಪ್ಯೂಗೆ ಜನ ಸ್ವಯಂ ಪ್ರೇರಿತ ಬೆಂಬಲ ವ್ಯಕ್ತಪಡಿಸುವ ಮೂಲಕ ಕೋವಿಡ್ ಹರಡದಂತೆ ತಡೆಯಲು ಸಹಕಾರ ನೀಡಿದ್ದಾರೆ. ಔಷಧ ಅಂಗಡಿ, ಪೆಟ್ರೋಲ್ ಬಂಕ್ ಹೊರತು ಪಡಿಸಿ ಬಹುತೇಕ ಅಂಗಡಿ, ಹೋಟೆಲ್,  ಬಾಗಿಲು ಮುಚ್ಚಿವೆ. ಬಸ್, ಆಟೊ ಸೇರಿದಂತೆ ಎಲ್ಲ ರೀತಿಯ  ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ನಗರದ ರಸ್ತೆಗಳು, ಬಸ್ ನಿಲ್ದಾಣ, ಮಾರುಕಟ್ಟೆ ಭಣಗುಡುತ್ತಿವೆ. ಕಾರು, ಬೈಕುಗಳಲ್ಲಿ ರಸ್ತೆಯಲ್ಲಿ ತಿರುಗಾಡುವವರನ್ನು ಪೊಲೀಸರು ತಡೆದು ವಿಚಾರಣೆ ನಡೆಸಿ ಅಗತ್ಯ ಇರುವವರನ್ನು ಮಾತ್ರ ಬಿಡುತ್ತಿದ್ದಾರೆ. ಅನಗತ್ಯವಾಗಿ ತಿರುಗಾಡುವವರಿಗೆ ಎಚ್ಚರಿಕೆ ನೀಡಿ ಮನೆಗೆ ಕಳುಹಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು